ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 2025 ನೇ ಸೆಪ್ಟೆಂಬರ್ 22 ರಿಂದ ಪ್ರಾರಂಭಿಸಿದ್ದು ಸಮೀಕ್ಷೆಯು ಪ್ರಗತಿಯಲ್ಲಿದೆ.
ಈ ಸಮೀಕ್ಷೆಯಲ್ಲಿ ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದ್ದರೂ, ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ/ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆಯೆಂದೂ ಹಾಗೂ ಮಾಹಿತಿಯನ್ನು ನೀಡುವ ಬಗ್ಗೆ, ಆಯೋಗ ಒತ್ತಾಯ ಮಾಡುತ್ತಿಲ್ಲವೆಂದು ಸ್ಪಷ್ಟಿಕರಿಸಲಾಗಿದೆಯೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.