ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿ, ಶಾಸಕರಾದಂತ ಪರ್ವೇಶ್ ವರ್ಮಾ ಅವರಿಗೆ ದೆಹಲಿ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.
ಇಂದು ದೆಹಲಿ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಆಯ್ಕೆ ಮಾಡಲಾಯಿತು.
Delhi BJP Legislative Party elects Rekha Gupta as its leader. She is set to become the Chief Minister of Delhi. pic.twitter.com/VdDWffxXLa
— ANI (@ANI) February 19, 2025
ಇನ್ನೂ ದೆಹಲಿಯ ನೂತನ ಉಪ ಮುಖ್ಯಮಂತ್ರಿಯನ್ನಾಗಿ ಪರ್ವೇಶ್ ವರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ. ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಮತ್ತು ಆರು ಕ್ಯಾಬಿನೆಟ್ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಮುಖ್ಯಮಂತ್ರಿ ಮತ್ತು ಹೊಸ ಕ್ಯಾಬಿನೆಟ್ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ದೆಹಲಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಈ ಹಿಂದೆ ರವಿಶಂಕರ್ ಪ್ರಸಾದ್ ಮತ್ತು ಓಂ ಪ್ರಕಾಶ್ ಧಂಕರ್ ಅವರನ್ನು ಪಕ್ಷದ ಕೇಂದ್ರ ವೀಕ್ಷಕರಾಗಿ ನೇಮಿಸಿತ್ತು.
BREAKING NEWS : ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ
ಜೋಗಾ ವಿಭಾಗ ಮೆಸ್ಕಾಂ ಪ್ರವೀಣ್, ನಿರಂಜನ್ ವರ್ಗಾವಣೆ ಮಾಡಿ: ರೈತ ಮುಖಂಡ ಎಂ.ಬಿ ಮಂಜಪ್ಪ ಹಿರೆನೆಲ್ಲೂರು ಒತ್ತಾಯ