ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಅದ್ದೂರು ಆಗಸ್ಟ್ 15ರ ಧ್ವಜಾರೋಹಣ ಮಾಡಲು ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರದಿಂದ ಈಗಾಗಲೇ ಧ್ವಜಾರೋಹಣ ಮಾಡಲು ಸಹಲ ಸಿದ್ಧತೆ ಪೂರ್ಣ ವ್ಯವಸ್ಥೆ ಮಾಡಲಾಗಿದೆ.
ಮೈದಾನದ ಸುತ್ತಮುತ್ತ ಈಗಾಗಲೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಇಂದು ಬೆಳಗ್ಗೆ ಪೊಲೀಸರು ಚಾಮರಾಜಪೇಟೆಯಲ್ಲಿ ಸರ್ಕಾರದಿಂದಲೇ ಪಥ ಸಂಚಲನ ನಡೆಸಲಾಯಿತು. ಡಿಜಿಪಿ ಲಕ್ಷ್ಮಣ್ ನಿಂಬರಗಿ ನೇತೃತ್ವದಲ್ಲಿ 3 ಕಿಲೋ ಮೀಟರ್ ಪೊಲೀಸ್ ಪರೇಟ್ ನಡೆಯಿತು.
ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದ ಭಾರೀ ಚರ್ಚೆಗೆ ಕಾರಣವಾಗಿದೆ. ಸ್ವಾತಂತ್ರ್ಯೋತ್ಸವ ದಿನದಂದು ಧ್ವಜಾರೋಹಣ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ.
ಈ ಹಿನ್ನಲೆಯಲ್ಲಿ ಶುಕ್ರವಾರ ಪೊಲೀಸ್ ಪಥಸಂಚಲನ ನಡೆಸಿದ ಜನರಿಗೆ ಧೈರ್ಯ ತುಂಬಲಾಗಿದೆ. ಕಿಡಿಗೇಡಿಗಳಿಗೆ ಎಚ್ಚರಿಕೆ ಕೆಲಸ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.