ಮಂಗಳೂರು : ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳ ಎಲ್ಲ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನು ರಾಷ್ಟ್ರಭಕ್ತಿಯ ಪಾಠ ಬೋಧನೆ ಮಾಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಹೌದು,. ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳ ಎಲ್ಲ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮವನ್ನು ಹೆಚ್ಚಿಸುವ ಕಾರ್ಯಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮುಂದಾಗಿದೆ.ರಾಜ್ಯ ಸರ್ಕಾರದ ಎಲ್ಲ ವಸತಿ ಶಾಲೆಯಗಳಲ್ಲಿ ರಾಷ್ಟ್ರಪ್ರೇಮ ಕುರಿತ ಬೋಧನಾ ಅವಧಿ ಆರಂಭಗೊಳ್ಳಲಿದೆ ಎನ್ನಲಾಗಿದೆ.
ರಾಜ್ಯದ 830 ವಸತಿ ಶಾಲೆ, ಸಮಾಜ ಕಲ್ಯಾಣ ಇಲಾಖೆಯ 1,500 ಹಾಸ್ಟೆಲ್ ಹಾಗೂ ಹಿಂದುಳಿದ ವರ್ಗ ಇಲಾಖೆಯ 2,400 ಹಾಸ್ಟೆಲ್ಗಳಿದ್ದು, ವಿದ್ಯಾರ್ಥಿಗಳಿಗೆ ಇನ್ನು ರಾಷ್ಟ್ರಭಕ್ತಿಯ ಪಾಠ ಬೋಧನೆ ಮಾಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಬಗ್ಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳಲ್ಲೂ ರಾಷ್ಟ್ರಭಕ್ತಿ ಭಾವನೆ ಮೂಡಬೇಕು, ಅವರು ರಾಷ್ಟ್ರಕ್ಕಾಗಿ ಬದುಕಬೇಕು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಪ್ರೇಮದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಭಾಷಣ, ಸಂವಾದ ಏರ್ಪಡಿಸಲಾಗುತ್ತದೆ.. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ನಿರ್ಮಿಸುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು.
‘ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ : ಸಿಎಂ ಬೊಮ್ಮಾಯಿ ಸ್ಪಷ್ಟನೆ