ಬೆಂಗಳೂರು : ಅನುಮತಿ ಇಲ್ಲದೇ ನನ್ನ ಫೋಟೋ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಪವಿತ್ರಾಗೌಡ ಮಾಜಿ ಪತಿ ಸಂಜಯ್ ಸಿಂಗ್ ಅವರು ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲಿಸುವುದಾಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅನುಮತಿ ಇಲ್ಲದೆ ನನ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಜಲಕ್ಷ್ಮಿ ಹಂಚಿಕೊಂಡಿದ್ದಾರೆ. ಹಾಗಾಗಿ ಅವರ ವಿರುದ್ಧ ಮಾನಹಾನಿ ಮೊಕದ್ದಮೆ ದಾಖಲಿಸುವುದಾಗಿ ಹೇಳಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ & ಗ್ಯಾಂಗ್ ಕಸ್ಟಡಿ ಅವಧಿ ಇಂದು ಅಂತ್ಯವಾಗಿದ್ದು, ಕ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ದರ್ಶನ್, ಪವಿತ್ರಾಗೌಡ ಸೇರಿ ಎಲ್ಲಾ ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.