ಬೆಂಗಳೂರು: ನ. 11ರಂದು ನಡೆಯಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ ಪೂರಕವಾಗಿ ನಡೆಯುತ್ತಿರುವ ರಾಜ್ಯಮಟ್ಟದ ಪವಿತ್ರ ಮೃತ್ತಿಕೆ ಸಂಗ್ರಹಣಾ ಅಭಿಯಾನವನ್ನು ಸುಗಮವಾಗಿ ನಡೆಸುವ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು.
ಈ ಸಭೆಯಲ್ಲಿ ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ, ಪ್ರಾಧಿಕಾರದ ಸದಸ್ಯ ಹಾಗೂ ಕಂದಾಯ ಸಚಿವ ಆರ್ ಅಶೋಕ್, ಮತ್ತು ಸಚಿವರಾದ ಎಸ್ ಟಿ ಸೋಮಶೇಖರ್ ನಾರಾಯಣಗೌಡ, ಮುನಿರತ್ನ ಪಾಲ್ಗೊಂಡಿದ್ದರು.
ಅಭಿಯಾನದ ಅಂಗವಾಗಿ ಚಾಲನೆ ಪಡೆದಿರುವ ವಿಶೇಷ ರಥಗಳು ಈಗಾಗಲೇ ಜಿಲ್ಲೆಗಳನ್ನು ತಲುಪಿವೆ. ಹಾಸನ, ಮಂಡ್ಯ, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮಾತ್ರ ಈ ರಥಗಳು ಇನ್ನೂ ತಲುಪಿಲ್ಲ ಎಂದು ಅಶ್ವತ್ಥನಾರಾಯಣ ವಿವರಿಸಿದರು
ಅಭಿಯಾನಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗೆ ಎಲ್ಲರೂ ಬದ್ಧವಾಗಿರಬೇಕು. ವಿಶೇಷ ರಥಗಳು ಆಯಾ ಗ್ರಾಮವನ್ನು ತಲುಪುವ ಮೊದಲೇ ಸಂದೇಶ ತಲುಪಿಸಿ ಅಭಿಯಾನಕ್ಕೆ ಒದಗಿಸಿರುವ ಪೌಚುಗಳಲ್ಲಿ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸಬೇಕು ಎಂದು ಅವರು ಸೂಚಿಸಿದರು.
ಬೆಂಗಳೂರಿಗರಿಗೆ ‘ಮುಖ್ಯ ಮಾಹಿತಿ’ : ‘ಪಟಾಕಿ’ ಅವಘಡ ಸಂಭವಿಸಿದ್ರೆ ತುರ್ತು ಚಿಕಿತ್ಸೆಗಾಗಿ ಈ ಸಹಾಯವಾಣಿ ಸಂಪರ್ಕಿಸಿ
ಹೀಗೆ ಸಂಗ್ರಹವಾದ ಪವಿತ್ರ ಮಣ್ಣನ್ನು ನ.7ರಂದು ಜಿಲ್ಲಾ ಕೇಂದ್ರಗಳಲ್ಲಿ,, ನ. 8ರಂದು ಈ ರಥಗಳು ಬೆಂಗಳೂರನ್ನು ತಲುಪುವಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಹೊಣೆಯಾಗಿದೆ. ಬಳಿಕ ಪವಿತ್ರ ಮೃತ್ತಿಕೆ ಸ್ವೀಕಾರ ಕಾರ್ಯಕ್ರಮ ನಡೆಸಲಾಗುವುದು ಎಂದು ಅವರು ನುಡಿದರು.
ಅಭಿಯಾನವು ಜಿಲ್ಲಾ ಮಟ್ಟಗಳಲ್ಲಿ ಆರಂಭವಾಗಿರುವ ಬಗ್ಗೆ ಸರ್ಕಾರಕ್ಕೆ ಅಧಿಕೃತ ಮಾಹಿತಿ ನೀಡಬೇಕು ಮತ್ತು ನಿರ್ದಿಷ್ಟ ಮಾರ್ಗಗಳಲ್ಲಿ ಸಾಗುವ ಬಗ್ಗೆ ಎಚ್ಚರ ವಹಿಸಬೇಕು. ಅಲ್ಲದೆ ಅಂದಂದಿನ ಪ್ರಗತಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಅವರು ನಿರ್ದೇಶಿಸಿದರು.
BIG UPDATE: ಸುಮಾರು 2 ಗಂಟೆಗಳ ಸುದೀರ್ಘ ಸ್ಥಗಿತದ ನಂತರ ‘ವಾಟ್ಸಾಪ್ ಸೇವೆ’ ಪುನರಾರಂಭ | WhatsApp is back
ಪ್ರತಿ ಗ್ರಾಮದಲ್ಲೂ ಇರುವ ಪವಿತ್ರ ಕೆರೆಕಟ್ಟೆ, ನದಿ, ಕಲ್ಯಾಣಿ ಅಥವಾ ಪುಷ್ಕರಿಣಿಯಿಂದ ಮೃತ್ತಿಕೆ ಸಂಗ್ರಹವಾಗುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಜೊತೆಗೆ ವಿಶೇಷ ರಥಗಳು ಆಗಮಿಸಿದಾಗ ದೇವಸ್ಥಾನಗಳಲ್ಲಿ ಪೂರ್ಣ ಕುಂಭ ಸ್ವಾಗತಕ್ಕೆ ವ್ಯವಸ್ಥೆ ಮಾಡಬೇಕು ಎಂದು ಅವರು ಕಟ್ಟುನಿಟ್ಟಾಗಿ ಹೇಳಿದ್ದಾರೆ.
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಗ್ರಾಮೀಣಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್, ಪ್ರಾಧಿಕಾರದ ಆಯುಕ್ತ ವಿನಯ್ ದೀಪ ಉಪಸ್ಥಿತರಿದ್ದರು.