ಬೆಂಗಳೂರು : ಸರ್ಕಾರ ವಿರುದ್ಧ ಶೇ 40 ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಮೂಲಕ ಬೃಹತ್ ಅಭಿಯಾನ ಆರಂಭಿಸಿದೆ. ಸದ್ಯ ಈ ವಿಚಾರ ಬಿಜೆಪಿ-ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ.
ಪೋಸ್ಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದುವರೆಗೆ ಐವರು ಕೆಪಿಸಿಸಿ ಸಾಮಾಜಿಕ ಜಾಲತಾಣದ ಸದಸ್ಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ‘ ನಾಳೆ ನಾನೇ ಪೇ ಸಿಎಂ ಪೋಸ್ಟರ್ ಅಂಟಿಸುತ್ತಿನಿ ಎಂದು ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ 40 % ಕಮಿಷನ್ ಆಂದೋಲನ ನಡೆಯುತ್ತಿದೆ. ನಾನು , ಡಿಕೆ ಶಿವಕುಮಾರ್ , ಹರಿಪ್ರಸಾದ್ ಎಲ್ಲರೂ ಆಂದೋಲನ ಮಾಡಿದ್ದಾರೆ. ಬಿಜೆಪಿಯವರು ಕೂಡ ಸುಳ್ಳು ಆರೋಪ ಮಾಡಿದ್ದಾರೆ. ನಮಗೂ ಬೇಡವಾದವರು ಅಂತ ಪೋಸ್ಟರ್ ಅಂಟಿಸಿದ್ದಾರೆ ? ಅವರನ್ನು ಯಾಕೆ ಬಂಧಿಸಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
40% ಕಮಿಷನ್ಗೆ ಕಿರುಕುಳ ನೀಡಿ ಒಂದು ಜೀವ ಬಲಿ ಪಡೆದ ಆರೋಪಿಯಾಗಿದ್ದ ಈಶ್ವರಪ್ಪರನ್ನು ಒಂದು ದಿನವೂ ಬಂಧಿಸಿ ವಿಚಾರಣೆ ನಡೆಸಲಿಲ್ಲ.
ಆದರೆ #PayCM ಪೋಸ್ಟರ್ ಅಂಟಿಸಿದವರ ವಿರುದ್ಧ 7,8 ಕೇಸ್ಗಳು, ಬಂಧನಕ್ಕೆ ವಿಶೇಷ ಪೊಲೀಸ್ ತಂಡ. ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ.@BSBommai ಅವರೇ, ಇದು ಹೇಡಿತನದ, ಲಜ್ಜೆಗೇಡಿತನದ ಪರಮಾವಧಿಯಲ್ಲವೇ?
— Karnataka Congress (@INCKarnataka) September 22, 2022
ಅಂಚೆ ಮತಪತ್ರಕ್ಕೆ ಚುನಾವಣಾ ಆಯೋಗದಿಂದ ಸಂಪೂರ್ಣ ಗೇಟ್ಪಾಸ್…?! ಚುನಾವಣಾ ಆಯೋಗದಿಂದ ಪ್ರಸ್ತಾವ