ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಪೇ ಸಿಎಂ ಅಭಿಯಾನ ಇದೀಗ ಎಲ್ಲ ಕಡೆ ಟ್ರೆಂಡ್ ಆಗಿ ಬಿಟ್ಟಿದೆ. ಭಾರಿ ಚರ್ಚೆಗೆ ಗ್ರಾಸವಾಗಿದ್ದ ಪೇ ಸಿಎಂ ಪೋಸ್ಟರ್ ಜಿಲ್ಲೆಗಳಿಗೂ ಹಬ್ಬಿದೆ.
ಹುಬ್ಬಳ್ಳಿಯಲ್ಲಿಪೇ ಮೇಯರ್ ಅಭಿಯಾನ ಶುರುವಾಗಿದ್ದು, ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ವಿರುದ್ಧ ಕಾಂಗ್ರೆಸ್ ನಾಯಕರು ಪೇ ಮೇಯರ್ ಎಂಬ ಅಭಿಯಾನ ಶುರು ಮಾಡಿದ್ದಾರೆ.
ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ ಸುಮಾರು 1.5 ಕೋಟಿ ದುಂದು ವೆಚ್ಚ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಮಾಡಲಾಗುತ್ತಿದೆ. ಪೆಂಡಾಲ್ ಹಾಕಿದ ನಂತ್ರ ನೀವು ಕೊಟೇಶನ್ ಕೇಳಿ ಹುಬ್ಬಳ್ಳಿಯ ಮಾನ ಕಳೆದ ನೀವು ತಕ್ಷಣ ರಾಜೀನಾಮೆ ಕೊಡಿ ಎಂದು ಹೇಳಲಾಗುತ್ತಿದೆ.