ಬೆಂಗಳೂರು : ಗ್ರಾಮ ಪಂಚಾಯತಿಗಳ ನೌಕರರಿಗೆ ಕನಿಷ್ಠ ವೇತನ ಕಾಯ್ದೆ ಅನ್ವಯ ವೇತನ ಪಾವತಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದಲ್ಲಿ ಸೂಚಿಸಿರುವಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳು ಕಾರ್ಮಿಕ ಇಲಾಖೆಯ ಕನಿಷ್ಟ ವೇತನ ಕಾಯ್ದೆಯ ದರಗಳನ್ವಯ ಮಾತ್ರ ಸಿಬ್ಬಂದಿ ವೇತನ ಪಾವತಿಸುವುದು ಹಾಗೂ ಯಾವುದೇ ಕಾರಣಕ್ಕೂ ಹೆಚ್ಚುವರಿ ವೇತನವನ್ನು ಪಾವತಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಲಾಗಿರುತ್ತದೆ.
ಆದರೆ ನಿಯಮಾನುಸಾರ ನೇಮಕಗೊಂಡ ಸಿಬ್ಬಂದಿಗಳಿಗೆ ಪ್ರಸ್ತುತ ಪಾವತಿಸುತ್ತಿರುವ ವೇತನವು ಕಾರ್ಮಿಕ ಇಲಾಖೆಯು ನಿಗದಿಪಡಿಸಿ ಕನಿಷ್ಠ ವೇತನಕ್ಕಿಂತ ಹೆಚ್ಚಾಗಿದ್ದಲ್ಲಿ, ಸದರಿ ವೇತನದಲ್ಲಿ ಸರ್ಕಾರದಿಂದ ಬಿಡುಗಡೆಗೊಳಿಸಿದ ಮೊತ್ತದಲ್ಲಿ ಕನಿಷ್ಟ ವೇತನವನ್ನು ಮಾತ್ರ ಪಾವತಿಸುವುದು ಮತ್ತು ಹೆಚ್ಚುವರಿ ಮೊತ್ತವನ್ನು ಗ್ರಾಮ ಪಂಚಾಯತಿಗಳು ತಮ್ಮ ಸ್ವಂತ ಸಂಪನ್ಮೂಲದ ಅನುದಾನದಲ್ಲಿ ಪಾವತಿಸಲು ನಿಯಮಾನುಸಾರ ಕ್ರಮ ಕೈಗೊಳ್ಳಲು ತಿಳಿಸಿದೆ.