ವಿಜಯಪುರ : ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಅವಾಜ್ ಹಾಕಿದ್ದ ಕಾನ್ ಸ್ಟೇಬಲ್ ಅಮಾನತುಗೊಳಿಸಲಾಗಿದೆ.
ವಿಜಯಪುರ ಗ್ರಾಮೀಣಾ ಠಾಣಾ ಪೊಲೀಸ್ ಪೇದೆ ರಾಜಶೇಖರ್ ಖಾನಾಪುರ ಫೇಸ್ ಬುಕ್ ನಲ್ಲಿ ಸಿದ್ದರಾಮಯ್ಯ ಭಾರತ್ ಜೋಡೋ ಯಾತ್ರೆಗೆ ಅಡ್ಡಿ ಪಡಿಸುವ ಬಿಜೆಪಿ ಹುನ್ನಾರದಲ್ಲಿ ಪೊಲೀಸ್ನವರೇನಾದರೂ ಶಾಮೀಲಾದ್ರೆ? ಎಂಬ ಹೇಳಿಕೆಗೆ ಕಾಮೆಂಟ್ ಮಾಡಿದ್ದಾರೆ. ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ ಎಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್ಸ್ಟೆಬಲ್ ರಾಜಶೇಖರ ಖಾನಾಪುರ ಸವಾಲು ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧಕ್ಕೆ ಕಾರಣವಾಗಿತ್ತು.
ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಬಿ ಸುಬ್ರಹ್ಮಣ್ಯ ಪೇದೆ ವಿರುದ್ಧ ದೂರು ದಾಖಲಿಸಿದ ಬೆನ್ನಲ್ಲೇ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆನಂದ್ ಕುಮಾರ್ ರಾಜಶೇಖರ್ ಖಾನಾಪುರನನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
ಪೊಲೀಸರಿಗೆ ಬೈಯ್ಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು ಎಂದು ಸವಾಲು ಹಾಕಿದ್ದನು. ಈ ವಿಚಾರ ಭಾರೀ ಪರ ವಿರೋಧ ಚರ್ಚೆಗೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಪರ ಹೇಳಿಕೆ ನೀಡಿರುವುದು ಖಂಡನೀಯ. ಪೊಲೀಸ್ ಪೇದೆ ರಾಜಶೇಖರ್ ಖಾನಾಪುರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಗ್ರಹಿಸಿದ್ದರು.
‘ಟಿಪ್ಪು ಎಕ್ಸ್ ಪ್ರೆಸ್’ ರೈಲನ್ನು ‘ಒಡೆಯರ್ ಎಕ್ಸ್ ಪ್ರೆಸ್’ ಅಂತ ಮಾಡಿದರೆ ಬಡತನ ಹೋಗಲ್ಲ : ಹೆಚ್.ಡಿ ಕುಮಾರಸ್ವಾಮಿ