ಕಲಬುರ್ಗಿ: ಪೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಪಿಡಿಒ ಒಬ್ಬರು ಬಿದ್ದಿರುವಂತ ಘಟನೆ ಕವಲಗಾದಲ್ಲಿ ನಡೆದಿದೆ.
ಕಲಬುರ್ಗಿ ಜಿಲ್ಲೆಯ ಕವಲಗಾ ಗ್ರಾಮ ಪಂಚಾಯ್ತಿ ಪಿಡಿಒ ಪ್ರೀತಿ ರಾಜ್ ಅವರು ಪಂಪ್ ಆಪರೇಟರ್ ಗುರುಸಿದ್ದಯ್ಯ ಎಂಬುವರನ್ನು ಕರ್ತವ್ಯಕ್ಕೆ ಮರು ನೇಮಕಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಗುರುಸಿದ್ದಯ್ಯ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ರೂ.17,000 ರೂಪಾಯಿಗಳನ್ನು ಪಂಪ್ ಆಪರೇಟರ್ ಗುರುಸಿದ್ದಯ್ಯ ಅವರಿಂದ ಪೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾಗಲೇ ಪಿಡಿಒ ಪ್ರೀತಿ ರಾಜ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಹಿಡಿದಿದ್ದಾರೆ.
ಈ ದಾಳಿಯನ್ನು ಪೊಲೀಸ್ ಅಧೀಕ್ಷಕ ಬಿ.ಕೆ ಉಮೇಶ್ ಮಾರ್ಗದರ್ಶನದಲ್ಲಿ, ಇನ್ಸ್ ಪೆಕ್ಟರ್ ಅರುಣ್ ಕುಮಾರ್ ತಂಡದಿಂದ ನಡೆಸಲಾಗಿದೆ. ಪಿಡಿಒ ಪ್ರೀತಿ ರಾಜ್ ಅವರನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ALERT : ಸಾರ್ವಜನಿಕರೇ ಎಚ್ಚರ : ಮೊಬೈಲ್ ನಲ್ಲಿ ಈ `ಗೇಮ್’ ಆಡಿದ್ರೆ ನಿಮ್ಮ ಖಾತೆಯಲ್ಲಿ ಹಣ ಖಾಲಿಯಾಗೋದು ಗ್ಯಾರಂಟಿ.!