ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪ್ರತೀಕಾರದ ದಾಳಿ ನಡೆಸಿದ್ದು, ದೇಶದ ಎಲ್ಲೆಡೆ ನಮ್ಮ ಸೈನಿಕರಿಗೆ ಅಭಿನಂದನೆಗಳ ಮಹಾಸಾಗರವೇ ಹರಿದು ಬರುತ್ತಿದೆ.
ಈ ನಡುವೆ ಈ ನಡುವೆ ಕರ್ನಾಟಕ ಕಾಂಗ್ರೆಸ್ (Karnataka Congress) ಮಹಾತ್ಮ ಗಾಂಧೀಜಿ ಅವರ ಸಂದೇಶವನ್ನು ಹಂಚಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ ‘ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ’ ಎಂದು ಟ್ವೀಟ್ ಮಾಡುವ ಮೂಲಕ ಶಾಂತಿ ಮಂತ್ರ ಜಪಿಸಿತ್ತು. ಈ ನಡುವೆ ಕೆಲವೇ ಕ್ಷಣದಲ್ಲಿ ಕಾಂಗ್ರೆಸ್ಸಿಗರು ಸೇರಿದಂತೆ ಜನರು ತೀವ್ರ ಕಿಡಿಕಾರಿದ್ದರು. ವ್ಯಾಪಕ ಆಕ್ರೋಶ ಬೆನ್ನಲ್ಲೇ ಕಾಂಗ್ರೆಸ್ ಆ ಟ್ವೀಟ್ನ್ನು ಡಿಲೀಟ್ ಮಾಡಿದೆ. ಬಳಿಕ ಭಾರತೀಯ ಸೇನೆಯನ್ನು ಹೊಗಳುವ ಮೂಲಕ ಮತ್ತೊಂದು ಹೊಸ ಟ್ವೀಟ್ ಮಾಡಿರುವುದು ಕಂಡು ಬಂದಿದೆ. ನಾವು ಕೇಂದ್ರ ಸರ್ಕಾರ ಮತ್ತು ನಮ್ಮ ಭದ್ರತಾ ಪಡೆಗಳೊಂದಿಗೆ ನಿಲ್ಲುತ್ತೇವೆʼ ಎಂದು ಮತ್ತೊಂದು ಪೋಸ್ಟ್ ಅನ್ನು ಕಾಂಗ್ರೆಸ್ ಹಂಚಿಕೊಂಡಿದೆ.
ಕ್ಷಣ ಕ್ಷಣದ ಅಪ್ ಡೇಟ್ ಗಾಗಿ ನಮ್ಮ ಗ್ರೂಪ್ ಸೇರಲು https://chat.whatsapp.com/IrUCOvj6lb9BOTe0MLkeaY ಕ್ಲಿಕ್ ಮಾಡಿ