ಮಂಡ್ಯ : ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಇದೀಗ ದ್ವಜ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಸಕ ಗಣಿಗ ರವಿಕುಮಾರ್ ಅವರು ಧ್ವಜಾರೋಹಣ ಮಾಡಬಾರದು ಒಂದು ವೇಳೆ ಮಾಡಿದರೆ ಗ್ರಾಮದಲ್ಲಿ ಶಾಂತಿ ಹದಗೆಡುತ್ತೆ ಎಂದು ಕೇರಗೋಡು ಗ್ರಾಮಸ್ಥರು ಎಚ್ಚರಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಈ ಹಿಂದೆ ಹನುಮ ಧ್ವಜ ಹಾರಿಸಿದ್ದರಿಂದ 108 ಅಡಿ ಎತ್ತರದ ಅರ್ಜುನ ಸ್ತಂಭ ವಿವಾದಕ್ಕೆ ಕಾರಣವಾಗಿತ್ತು. ಇದೀಗ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಧ್ವಜ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಸಕ ಗಣಿಗ ರವಿಕುಮಾರ್ ಧ್ವಜಾರೋಹಣಕ್ಕೆ ವಿರೋಧ ವ್ಯಕ್ತವಾಗಿದೆ.
ನಾಳೆ ಆ.15 ಸ್ವತಂತ್ರ ದಿನಾಚರಣೆಯ ಹಿನ್ನೆಲೆಯಲ್ಲಿ ವಿವಾದಿತ ಅರ್ಜುನ ಸ್ತಂಭದಲ್ಲಿ ಶಾಸಕ ಗಣಿಗ ರವಿಕುಮಾರ್ ಧ್ವಜಾರೋಹಣಕ್ಕೆ ವಿರೋಧ ವ್ಯಕ್ತವಾಗಿದ್ದು, ಇಂದು ಉಪವಿಭಾಗಾಧಿಕಾರಿ ಶಿವಮೂರ್ತಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಶಾಸಕರು ಧ್ವಜಾರೋಹಣ ಮಾಡದಂತೆ ಆಗ್ರಹಿಸಿ, ಗ್ರಾಮಸ್ಥರೇ ಧ್ವಜಾರೋಹಣ ನೆರವೇರಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.