ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರೊಂದು ಪಾದಚಾರಿಗೆ ಡಿಕ್ಕಿಹೊಡೆದ ಪರಿಣಾಮ, ಸ್ಥಳದಲ್ಲೇ ವ್ಯಕ್ತಿಯೊಬ್ಬ ಸಾವನ್ನಪ್ಪಿರೋ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಬಾಲಕೃಷ್ಣನ್ ಎಂಬುವರಿ ಕಾರೋಂದು ಡಿಕ್ಕಿಯಾಗಿದೆ. ಈ ಪರಿಣಾಮ ಸ್ಥಳದಲ್ಲೇ ಪಾದಚಾರಿ ಬಾಲಕೃಷ್ಣನ್ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ನೆಲಮಂಗಲ ಬಳಿಯ ವಿಶ್ವೇಶ್ವರಪುರಂ ಬಳಿಯಲ್ಲಿ ಈ ಹಿಟ್ ಅಂಡ್ ರನ್ ಕೇಸ್ ನಡೆದಿದೆ. ಈ ಘಟನೆಯ ಬಳಿಕ ಕಾರು ಚಾಲಕ ಕಾರು ಬಿಟ್ಟು ಪರಾರಿಯಾಗಿರೋದೋಗಿ ತಿಳಿದು ಬಂದಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING: ರಾಜ್ಯದ ಈ ಪ್ರಸಿದ್ಧ ‘ಶ್ರೀರಾಮಮಂದಿರ’ ಸ್ಪೋಟಿಸೋದಾಗಿ ‘ಅಲ್ಲಾ ಹು ಹೆಸರಿ’ನಲ್ಲಿ ‘ಬಾಂಬ್ ಬೆದರಿಕೆ’ ಪತ್ರ
BREAKING: ರಾಮೇಶ್ವರಂ ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ‘ಬಾಂಬರ್ ಹೊಸ ಪೋಟೋ’ ಬಿಡುಗಡೆ ಮಾಡಿದ ‘NIA’