ಹಾಸನ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜ ಗೌಡರನ್ನು ಇದೀಗ ಎಸ್ಐಟಿ ಅಧಿಕಾರಿಗಳು ಹಾಸನದ 5 ನೇ ಸಿವಿಲ್ ನ್ಯಾಯಾಲಯಕ್ಕೆ ಕರೆತಂದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದೇವರಾಜೇಗೌಡ ನನ್ನು ಒಂದು ದಿನ ಎಸ್ಐಟಿ ವಶಕ್ಕೆ ಕೋರ್ಟ್ ನೀಡಿತ್ತು. ಇದೀಗ ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ದೇವರಾಜೆಗೌಡನನ್ನು ಕೋರ್ಟಿಗೆ ಕರೆತಂದಿದ್ದಾರೆ ಲ್.ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟಿಗೆ ಎಸ್ಐಟಿ ಅಧಿಕಾರಿಗಳು ಕರೆತಂದಿದ್ದಾರೆ. ಹಾಗಾಗಿ ಹಾಸನ ನ್ಯಾಯಾಲಯದ ಆವರಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.