ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಪೆನ್ ಡ್ರೈವ್ ಹಂಚಿಕೆ ಮಾಡಿದ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ಇದೀಗ ಮತ್ತೊಬ್ಬ ಆರೋಪಿ ಚೇತನ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಚೇತನ್ ಗೆ ಎಸ್ ಐಟಿ ನೋಟಿಸ್ ನೀಡಿದೆ. ಇಂದು ಬೆಳಗ್ಗೆ ೧೧ ಗಂಟೆಗೆ ಬೆಂಗಳೂರಿನ ಸಿಐಡಿ ಕಚೇರಿಗೆ ಹಾಜರಾಗುವಂತೆ ಚೇತನ್ ಗೆ ಸೂಚನೆ ನೀಡಲಾಗಿದೆ.
ಪೆನ್ ಡ್ರೈವ್ ಪ್ರಕರಣದಲ್ಲಿ ಎಂಟು ಆರೋಪಿಗಳ ಪೈಕಿ ಚೇತನ್ ಒಬ್ಬನಾಗಿದ್ದು, ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಚೇತನ್ ಗೌಡ, ಲಿಖಿತ್ ಗೌಡ, ದೇವರಾಜೇಗೌಡರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.