Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗದಲ್ಲಿ ಹುಲಿಗಳ ಮೇಲೆ ಕಣ್ಣಿಡಲು ಇಟ್ಟಿದ್ದ ಕ್ಯಾಮೆರಾಗಳೇ ಕಳ್ಳತನ! ಅರಣ್ಯ ಇಲಾಖೆಗೆ ಶಾಕ್ ನೀಡಿದ ಕಿರಾತಕರು

24/04/2026 4:09 PM

BREAKING: ‘AAP’ಗೆ ಸಂಸದ ರಾಘವ್ ಚಡ್ಡಾ ಗುಡ್ ಬೈ: ಬಿಜೆಪಿ ಪಕ್ಷ ಸೇರ್ಪಡೆ | Raghav Chadha

24/04/2026 3:54 PM

BREAKING: ಬೆಂಗಳೂರಲ್ಲಿ ‘ಸಿಇಟಿ ಪರೀಕ್ಷೆ’ ವೇಳೆ ‘ಜನಿವಾರ’ ತೆಗೆಸಿದ ಮೂವರು ಸಿಬ್ಬಂದಿ ಸಸ್ಪೆಂಡ್

24/04/2026 3:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ : ವಿಶೇಷ ನೋಂದಣಿ ಅಭಿಯಾನ ಶಿಬಿರ 
KARNATAKA

ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ : ವಿಶೇಷ ನೋಂದಣಿ ಅಭಿಯಾನ ಶಿಬಿರ 

By kannadanewsnow0520/01/2026 5:31 AM
ಬಳ್ಳಾರಿ,ಜ.19(ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಲಾ ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ.-ಎಸ್.ವೈಎA) ಪಿಂಚಣಿ ಯೋಜನೆಯಡಿ ಕಾರ್ಮಿಕರನ್ನು ನೋಂದಾಯಿಸಲು ವಿಶೇಷ ನೋಂದಣಿ ಅಭಿಯಾನ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಜಿ ಖೈನೂರು ಅವರು ತಿಳಿಸಿದ್ದಾರೆ.
ನಗರ ಪ್ರದೇಶಗಳಲ್ಲಿ ಫೆ.15 ರ ವರೆಗೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಫೆ.16 ರಿಂದ ಮಾ.15 ರವರೆಗೆ ವಿಶೇಷ ನೋಂದಣಿ ಅಭಿಯಾನ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ ರೀತಿಯ ಇತರೆ ಉದ್ಯೋಗಗಳ ಕೆಲಸಗಾರರು ಅಸಂಘಟಿತ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರವು ಪ್ರಧಾನಮಂತ್ರಿ ಶ್ರಮ್‌ಯೋಗಿ ಮಾನ್-ಧನ್ (ಪಿಎಂ-ಎಸ್‌ವೈಎA) ಎಂಬ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆ ಜಾರಿಗೆ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಅರ್ಹತೆ:
ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18 ರಿಂದ 40 ವರ್ಷದೊಳಗಿರಬೇಕು. ಅವರ ಮಾಸಿಕ ಆದಾಯ ರೂ.15,000 ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಅವರು ಆದಾಯ ತೆರಿಗೆ/ಇ.ಎಸ್.ಐ/ಪಿ.ಎಫ್/ಎನ್.ಪಿ.ಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು. ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು.
ನೋAದಣಿ ವಿಧಾನ:
ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ “ಕಾಮನ್ ಸರ್ವೀಸ್ ಸೆಂಟರ್ (ಸಿ.ಎಸ್.ಸಿ-ಕಂಪ್ಯೂಟರ್ ಸೆಂಟರ್)ಗಳಲ್ಲಿ ನೋಂದಾಯಿಸಬಹುದು. ಸಿ.ಎಸ್.ಸಿ.ಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ ಶಾಖೆ, ಕಾರ್ಮಿಕ ಇಲಾಖೆ, ಇ.ಎಸ್.ಐ. ಕಾರ್ಪೋರೇಷನ್ ಹಾಗೂ ಭವಿಷ್ಯನಿಧಿ ಸಂಘಟನೆಯ ಕಚೇರಿ ಹಾಗು ಇಲಾಖೆಯ ವೆಬ್ ಸೈಟ್ ವಿಳಾಸ ಹಾಗೂ ವೆಬ್ ಸೈಟ್ ವಿಳಾಸ http://locator.csccloud.in ನಲ್ಲಿ ಪಡೆಯಬಹುದು.
ಕಾರ್ಮಿಕರು ತಮ್ಮೊಂದಿಗೆ ಆರಂಭಿಕ ವಂತಿಕೆ ಮೊತ್ತ, ಆಧಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐ.ಎಫ್.ಎಸ್.ಸಿ ಕೋಡ್ ವಿವರಗಳೊಂದಿಗೆ (ಬ್ಯಾಂಕ್ ಪಾಸ್‌ಪುಸ್ತಕ/ಚೆಕ್ ಪುಸ್ತಕ/ಬ್ಯಾಂಕ್ ಸ್ಟೇಟ್ ಮೆಂಟ್) ಅನ್ನು ತಮ್ಮ ನಾಮ ನಿರ್ದೇಶಿತರ ವಿವರಗಳು ಮತ್ತು ಮೊಬೈಲ್ ಹ್ಯಾಂಡ್‌ಸೆಟ್‌ನೊAದಿಗೆ “ಕಾಮನ್ ಸರ್ವೀಸ್ ಸೆಂಟರ್’’ ಗಳಿಗೆ ತೆರಳುವುದು. ಮೊದಲ ಕಂತಿನ ವಂತಿಕೆಯನ್ನು ನಗದು ರೂಪದಲ್ಲಿ ಪಾವತಿಸುವುದು ಹಾಗೂ ತದನಂತರ ಮಾಸಿಕ ವಂತಿಕೆಯನ್ನು ಅವರ ಖಾತೆಯಿಂದ ಆಟೋ-ಡೆಬಿಟ್ ಮೂಲಕ ಕಟಾವು ಮಾಡಿಕೊಳ್ಳಲಾಗುತ್ತದೆ.
ಯೋಜನೆಯ ಸೌಲಭ್ಯ:
ಕೇಂದ್ರ ಸರ್ಕಾರವು ಚಂದದಾರರು ಪಾವತಿಸುವ ವಂತಿಕೆಯನ್ನು ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3,000 ರೂ.ಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ. ಚಂದದಾರರು 10 ವರ್ಷದೊಳಗಾಗಿ ಯೋಜನೆಯಿಂದ ನಿರ್ಗಮಿಸಿದಲ್ಲಿ ಅವರು ಪಾವತಿಸಿರುವ ವಂತಿಕೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ.
10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದಲ್ಲಿ ಅವರು ಪಾವತಿಸಿದ ವಂತಿಕೆಯೊAದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ, ಇವುಗಳಲ್ಲಿ ಯಾವುದು ಹೆಚ್ಚು ಅದನ್ನು ಪಾವತಿಸಲಾಗುವುದು. ಫಲಾನುಭವಿಯ ನಿರಂತರವಾಗಿ ವಂತಿಕೆಯನ್ನು ಪಾವತಿಸಿದ್ದು, ಅವರು 60 ವರ್ಷ ಒಳಗಾಗಿ ಮೃತಪಟ್ಟಲ್ಲಿ ಅಥವಾ ಶಾಶ್ವತ ಅಂಗವಿಕಲತೆ ನ್ಯೂನತೆಯಿಂದ ವಂತಿಕೆಯನ್ನು ಪಾವತಿಸಲು ಸಾಧ್ಯವಾಗದಿದ್ದಲ್ಲಿ ಅವನ/ಅವಳ ಸಂಗಾತಿಯು ತದ ನಂತರ ಈ ಯೋಜನೆಗೆ ಸೇರಬಹುದಾಗಿದ್ದು, ವಂತಿಕೆಯನ್ನು ಪಾವತಿಸಿ ಮುಂದುವರೆಸಬಹುದಾಗಿದೆ.
ಅವರ ವಂತಿಕೆಯನ್ನು ಬಡ್ಡಿಯೊಂದಿಗೆ ಪಡೆಯಲು ಅರ್ಹರಾಗಿರುತ್ತಾರೆ. ಪಿಂಚಣಿ ಆರಂಭಗೊAಡ ನಂತರ ಚಂದದಾರರು ಮೃತಪಟ್ಟಲ್ಲಿ, ಅವರ ಪತ್ನಿ/ಪತಿ ಮಾತ್ರ ಪಿಂಚಣಿಯ ಶೇ.50 ರಷ್ಟು ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಯೋಜನೆಯ ವಿದ್ಯುನ್ಮಾನ ಆಧಾರಿತವಾಗಿದ್ದು, ಎಸ್.ಎಂ.ಎಸ್. ಮೂಲಕ ಎಲ್ಲಾ ವ್ಯವಹಾರಗಳ ಮಾಹಿತಿಯನ್ನು ಫಲಾನುಭವಿಗೆ ಕಾಲಕಾಲಕ್ಕೆ ತಿಳಿಸಲಾಗುವುದು. ಮಾಹಿತಿಗಾಗಿ ಕಾರ್ಮಿಕರು ಹತ್ತಿರದ “ಕಾಮನ್ ಸರ್ವೀಸ್ ಸೆಂಟರ್ (ಸಿ.ಎಸ್.ಸಿ-ಕಂಪ್ಯೂಟರ್ ಸೆಂಟರ್) ಗಳಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಕೌಲ್ ಬಜಾರ್ ನ ಮೊಹಮ್ಮದೀಯ ಕಾಲೇಜು ಹಿಂಭಾಗದ ಬಳ್ಳಾರಿ ಉಪವಿಭಾಗದ ಕಾರ್ಮಿಕ ಭವನದ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ಆಯಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರುಗಳನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.
Share. Facebook Twitter LinkedIn WhatsApp Email

Related Posts

ಶಿವಮೊಗ್ಗದಲ್ಲಿ ಹುಲಿಗಳ ಮೇಲೆ ಕಣ್ಣಿಡಲು ಇಟ್ಟಿದ್ದ ಕ್ಯಾಮೆರಾಗಳೇ ಕಳ್ಳತನ! ಅರಣ್ಯ ಇಲಾಖೆಗೆ ಶಾಕ್ ನೀಡಿದ ಕಿರಾತಕರು

24/04/2026 4:09 PM1 Min Read

BREAKING: ಬೆಂಗಳೂರಲ್ಲಿ ‘ಸಿಇಟಿ ಪರೀಕ್ಷೆ’ ವೇಳೆ ‘ಜನಿವಾರ’ ತೆಗೆಸಿದ ಮೂವರು ಸಿಬ್ಬಂದಿ ಸಸ್ಪೆಂಡ್

24/04/2026 3:47 PM1 Min Read

ಗ್ರಾಹಕನ ಹೋರಾಟಕ್ಕೆ ಸಂದ ಜಯ: 2.52 ಲಕ್ಷ ಬಡ್ಡಿ ಸಮೇತ ಮರಳಿಸಲು ಪ್ರವಾಸಿ ಏಜೆನ್ಸಿಗೆ ಕೋರ್ಟ್ ಆದೇಶ

24/04/2026 3:21 PM2 Mins Read
Recent News

ಶಿವಮೊಗ್ಗದಲ್ಲಿ ಹುಲಿಗಳ ಮೇಲೆ ಕಣ್ಣಿಡಲು ಇಟ್ಟಿದ್ದ ಕ್ಯಾಮೆರಾಗಳೇ ಕಳ್ಳತನ! ಅರಣ್ಯ ಇಲಾಖೆಗೆ ಶಾಕ್ ನೀಡಿದ ಕಿರಾತಕರು

24/04/2026 4:09 PM

BREAKING: ‘AAP’ಗೆ ಸಂಸದ ರಾಘವ್ ಚಡ್ಡಾ ಗುಡ್ ಬೈ: ಬಿಜೆಪಿ ಪಕ್ಷ ಸೇರ್ಪಡೆ | Raghav Chadha

24/04/2026 3:54 PM

BREAKING: ಬೆಂಗಳೂರಲ್ಲಿ ‘ಸಿಇಟಿ ಪರೀಕ್ಷೆ’ ವೇಳೆ ‘ಜನಿವಾರ’ ತೆಗೆಸಿದ ಮೂವರು ಸಿಬ್ಬಂದಿ ಸಸ್ಪೆಂಡ್

24/04/2026 3:47 PM

BREAKING : ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾದ ರಾಜ್ಯಸಭಾ ಸಂಸದ ರಾಘವ ಛಡ್ಡಾ!

24/04/2026 3:45 PM
State News
KARNATAKA

ಶಿವಮೊಗ್ಗದಲ್ಲಿ ಹುಲಿಗಳ ಮೇಲೆ ಕಣ್ಣಿಡಲು ಇಟ್ಟಿದ್ದ ಕ್ಯಾಮೆರಾಗಳೇ ಕಳ್ಳತನ! ಅರಣ್ಯ ಇಲಾಖೆಗೆ ಶಾಕ್ ನೀಡಿದ ಕಿರಾತಕರು

By kannadanewsnow0924/04/2026 4:09 PM KARNATAKA 1 Min Read

ಶಿವಮೊಗ್ಗ: ಕಾಡಿನ ರಾಜ ಹುಲಿಗಳ ಚಲನವಲನ ಹಾಗೂ ಅವುಗಳ ಜೀವನಶೈಲಿಯ ಅಧ್ಯಯನಕ್ಕಾಗಿ ಅರಣ್ಯ ಇಲಾಖೆ ಅಳವಡಿಸಿದ್ದ ಅತ್ಯಾಧುನಿಕ ಕ್ಯಾಮೆರಾಗಳನ್ನೇ ಕಳ್ಳತನ…

BREAKING: ಬೆಂಗಳೂರಲ್ಲಿ ‘ಸಿಇಟಿ ಪರೀಕ್ಷೆ’ ವೇಳೆ ‘ಜನಿವಾರ’ ತೆಗೆಸಿದ ಮೂವರು ಸಿಬ್ಬಂದಿ ಸಸ್ಪೆಂಡ್

24/04/2026 3:47 PM

ಗ್ರಾಹಕನ ಹೋರಾಟಕ್ಕೆ ಸಂದ ಜಯ: 2.52 ಲಕ್ಷ ಬಡ್ಡಿ ಸಮೇತ ಮರಳಿಸಲು ಪ್ರವಾಸಿ ಏಜೆನ್ಸಿಗೆ ಕೋರ್ಟ್ ಆದೇಶ

24/04/2026 3:21 PM

ಮೇ 5ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿಯಾಗಿ ರಾಷ್ಟ್ರಪತಿ ಆಳ್ವಿಕೆ : ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಹೇಳಿಕೆ

24/04/2026 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.