Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಪಾಕಿಸ್ತಾನದಲ್ಲಿ ಭೀಕರ ಅವಳಿ ಬಾಂಬ್ ಸ್ಫೋಟ: ಕನಿಷ್ಠ 7 ಜನರ ಸಾವು, ರಕ್ಷಣೆಗೆ ಧಾವಿಸಿದವರ ಮೇಲೂ ಕಿಡಿಗೇಡಿಗಳ ಅಟ್ಯಾಕ್!

ಅಲೋವೆರಾ ಆಧರಿತ ಕ್ರೀಮ್‌ಗಳು ಸೇರಿ 16 ಸಂಯೋಜಿತ ಔಷಧಿಗಳ ಉತ್ಪಾದನೆ ಮತ್ತು ಮಾರಾಟ ತಕ್ಷಣದಿಂದಲೇ ನಿಷೇಧಿಸಿದ ಕೇಂದ್ರ ಸರ್ಕಾರ!

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನರೇ ನಮ್ಮ ಪಾಲಿನ ದೇವರು, ಜನರ ಸೇವೆಗೆ ಸದಾ ಬದ್ಧ- ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಜನರೇ ನಮ್ಮ ಪಾಲಿನ ದೇವರು, ಜನರ ಸೇವೆಗೆ ಸದಾ ಬದ್ಧ- ಡಿಸಿಎಂ ಡಿ.ಕೆ. ಶಿವಕುಮಾರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: “ಜನರೇ ನಮ್ಮ ಪಾಲಿನ ದೇವರು. ಜನರ ಸಮಸ್ಯೆ ಸರ್ಕಾರದ ಸಮಸ್ಯೆ, ಜನರ ಪರಿಹಾರವೇ ರಾಜ್ಯದ ಪರಿಹಾರ. ಜನರ ಸೇವೆಗೆ ನಾವು ಸದಾ ಬದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಯಲಹಂಕದಲ್ಲಿ ಶುಕ್ರವಾರ ನಡೆದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  “ಇಲ್ಲಿಗೆ ನಾನೊಬ್ಬನೇ ಬಂದಿಲ್ಲ. ಪೊಲೀಸ್ ಸೇರಿದಂತೆ ಸುಮಾರು 300 ಅಧಿಕಾರಿಗಳು ನಿಮ್ಮ ಸೇವೆಗೆ ಬಂದಿದ್ದೇವೆ. ನೀವು ನಮಗೆ ಅಧಿಕಾರ ನೀಡಿದ್ದೀರಿ. ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇನೆ. ಋಣ ತೀರಿಸುವ ವಿಚಾರದಲ್ಲಿ ಭೀಷ್ಮ ಧರ್ಮರಾಯನಿಗೆ ಒಂದು ಮಾತು ಹೇಳುತ್ತಾನೆ. ತಂದೆ ತಾಯಿ, ದೇವರು, ಗುರುಗಳು ಹಾಗೂ ಸಮಾಜ ಈ ನಾಲ್ಕು ಋಣವನ್ನು ನಾವು ತೀರಿಸಬೇಕಂತೆ. ಇವರ ಋಣವನ್ನು ಧರ್ಮದಿಂದ ತೀರಿಸಬೇಕು ಎಂದರು.

ಈ ಹಿಂದೆ ಅನೇಕರು ಬೆಂಗಳೂರಿನ ಮಂತ್ರಿಯಾಗಿ ಅವರ ಶೈಲಿಯಲ್ಲಿ ಕೆಲಸ ಮಾಡಿದ್ದಾರೆ. ನಾನು 35 ವರ್ಷಗಳ ಹಿಂದೆ ಶಾಸಕನಾದಾಗ ಪ್ರತಿ ವರ್ಷ ಪ್ರತಿ ಹಳ್ಳಿಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗಿ ಅವರ ಕಷ್ಟ ಆಲಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿದ್ದೆ. ಅದರಿಂದ ನಮ್ಮ ಮೇಲಿನ ಒತ್ತಡ ಕಡಿಮೆ ಆಗುತ್ತದೆ. ಪ್ರತಿನಿತ್ಯ ಜನ ನಮ್ಮ ಮನೆ ಬಾಗಿಲಿಗೆ ತಮ್ಮ ಸಮಸ್ಯೆ ಹೊತ್ತುಕೊಂಡು ಬರುತ್ತಿದ್ದಾರೆ. ಇದನ್ನು ತಪ್ಪಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಖ್ಯಮಂತ್ರಿಗಳು ಜನಸ್ಪಂದನ ಕಾರ್ಯಕ್ರಮ ಮಾಡಿ, ಎಲ್ಲಾ ಸಚಿವರಿಗೂ ಸೂಚನೆ ನೀಡಿದ್ದಾರೆ. ನಾನೂ ನನ್ನ ಕ್ಷೇತ್ರ ಹಾಗೂ ಆನೇಕಲ್ ನಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡಿದ್ದೇನೆ. ಜನ ತಮ್ಮ ಆಸ್ತಿಗಳ ಖಾತೆ ವಿಚಾರ, ಪಿಂಚಣಿ ಸೇರಿದಂತೆ ಸರ್ಕಾರದ ಸವಲತ್ತುಗಳ ಸಮಸ್ಯೆ ಹೊತ್ತು ತರುತ್ತಾರೆ ಎಂದು ಹೇಳಿದರು.

ಅಧಿಕಾರಿಗಳು ಗೌರವ ನೀಡದಿದ್ದಾಗ ಜನ ರಾಜಕಾರಣಿಗಳ ಬಳಿ ಬರುತ್ತಾರೆ. ಅಧಿಕಾರಿಗಳು ಲಂಚ ಕೇಳಿ ಹಿಂಸೆ ಕೊಟ್ಟಾಗ ಜನ ನಮ್ಮತ್ತ ಬರುತ್ತಾರೆ. ಇಂತಹ ದೂರುಗಳು ಹೆಚ್ಚುತ್ತಿವೆ. ಇವುಗಳನ್ನು ತಪ್ಪಿಸಬೇಕು. ಯಾರೇ ಲಂಚ ಕೇಳಿದರೂ ನಿರ್ದಾಕ್ಷಿಣ್ಯವಾಗಿ ದೂರು ನೀಡಿ. ಯಾರೇ ಆಗಲಿ ನನ್ನ ಹೆಸರು, ಕೃಷ್ಣ ಭೈರೇಗೌಡ, ವಿಶ್ವನಾಥ್, ಪೊಲೀಸ್ ಅಧಿಕಾರಿಗಳು, ಕಂದಾಯ ಅಧಿಕಾರಿಗಳು ಸೇರಿದಂತೆ ಯಾರ ಹೆಸರಲ್ಲಿ ಹಣ ಕೇಳಿದರೂ ನಮ್ಮ ಗಮನಕ್ಕೆ ತನ್ನಿ, ನಾವು ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಕೆ.ಆರ್ ಪುರದ ಕಾರ್ಯಕ್ರಮದಲ್ಲಿ ನಾನೇ ಇಂತಹ ಹತ್ತು ಪ್ರಕರಣಗಳನ್ನು ನೋಡಿದ್ದೇನೆ. ಇದನ್ನು ಬಗೆಹರಿಸಿ ಅವರಿಗೆ ಹಣ ನೀಡಲಾಗುವುದು ಎಂದರು.

ಈ ಮಧ್ಯೆ ವಿಶ್ವನಾಥ್ ಅವರು ಅನುದಾನದ ವಿಚಾರ ಪ್ರಸ್ತಾಪ ಮಾಡಿದರು. ಮುಂದಿನ ದಿನಗಳಲ್ಲಿ ಇದನ್ನು ಬಗೆಹರಿಸಲಾಗುವುದು. ಬೆಂಗಳೂರಿನಲ್ಲಿ ಸ್ವಯಂ ತೆರಿಗೆ ವ್ಯವಸ್ಥೆಯಲ್ಲಿ ಆಸ್ತಿಗೆ ಸರಿಯಾದ ಲೆಕ್ಕದಲ್ಲಿ ತೆರಿಗೆ ಪಾವತಿ ಮಾಡುತ್ತಿಲ್ಲ. ಹೀಗಾಗಿ ನಾವು ಸಮೀಕ್ಷೆ ಮಾಡುತ್ತಿದ್ದೇವೆ. ತೆರಿಗೆ ಪಾವತಿ ಮಾಡದಿದ್ದರೆ ರಸ್ತೆ ಮಾಡುವುದು, ನೀರು ನೀಡುವುದು ಹೇಗೆ? ಬೆಂಗಳೂರಿನಲ್ಲಿ 1.40 ಕೋಟಿ ಜನ ವಾಸ ಮಾಡುತ್ತಿದ್ದಾರೆ. ಇವರಿಗೆ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಬೇಕು. ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಹೆಬ್ಬಾಳ ಹಾಗೂ ಯಲಹಂಕ ನಂತರ ಕುಡಿಯುವ ನೀರು ಪೂರೈಸಬಾರದು ಎಂದು ಸಹಿ ಹಾಕಿಸಿದ್ದರು ಎಂದು ತಿಳಿಸಿದರು.

ಮೊನ್ನೆಯಷ್ಟೇ ಕುಡಿಯುವ ಉದ್ದೇಶಕ್ಕೆ 6 ಟಿಎಂಸಿ ನೀರನ್ನು ಪೂರೈಸಲು ನಿರ್ದೇಶನ ನೀಡಲಾಗಿದೆ. ಇನ್ನು ಒಂದೂವರೆ ಟಿಎಂಸಿ ನೀರು ಬಾಕಿ ಇದೆ. ಎತ್ತಿನಹೊಳೆ ನೀರು ಪೂರೈಕೆ, ಅಂತರ್ಜಲ ನೀರಿನ ಸದ್ಬಳಕೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಇನ್ನು ಬೆಂಗಳೂರಿನಲ್ಲಿ ಕಸದ ಹಾವಳಿ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಕಸ ತಂದು ಸುರಿಯುತ್ತಾರೆ. ಕಟ್ಟಡ ತ್ಯಾಜ್ಯವನ್ನು ರಸ್ತೆ ಬದಿ ಸುರಿದು ಹೋಗುತ್ತಾರೆ. ಇದನ್ನು ತಡೆಗಟ್ಟಿ ಬೆಂಗಳೂರಿನ ಸ್ವಚ್ಛತೆ ಕಾಪಾಡಲು ಕ್ಯಾಮೆರಾ ಅಳವಡಿಸುತ್ತಿದ್ದೇವೆ. ಈ ರೀತಿ ಕಸ ಸುರಿಯುವವರ ವಿರುದ್ಧ ಕೇಸ್ ದಾಖಲಿಸಲಾಗುವುದು ಎಂದರು.

ಬೆಂಗಳೂರು ಯೋಜಿತ ನಗರವಲ್ಲ. ಹಿಂದೆ ಕೆಂಪೇಗೌಡರು ನಾಲ್ಕು ಸ್ತಂಭಗಳನ್ನು ಅಳವಡಿಸಿ ನರರ ನಿರ್ಮಾಣ ಮಾಡಿದ್ದರು. ಆದರೆ ಈಗ ಅದು ಐದಾರು ಪಟ್ಟು ವಿಸ್ತೀರ್ಣವಾಗಿದೆ. ಇಲ್ಲಿರುವ ಹವಾಮಾನ, ಶಿಕ್ಷಣ, ಆರೋಗ್ಯ ಸೌಲಭ್ಯದಿಂದ ಬೆಂಗಳೂರಿಗೆ ಬಂದವರು ವಾಪಸ್ ಹೋಗುವುದಿಲ್ಲ. ಹೀಗಾಗಿ ಬೆಂಗಳೂರಿನ ನಿರ್ವಹಣೆ ಬಹಳ ಮುಖ್ಯ ಎಂದು ಹೇಳಿದರು.

ಇಂದು ಇಲ್ಲಿ ಅಹವಾಲು ತರುವ ಜನರಿಗೆ ಕಾನೂನು ಚೌಕಟ್ಟಿನಲ್ಲಿ ಪರಿಹಾರ ನೀಡಬಹುದೋ ನೀಡುತ್ತೇವೆ. ಒಂದು ವೇಳೆ ಪರಿಹಾರ ನೀಡಲು ಆಗದಿದ್ದರೆ, ಯಾವ ಕಾರಣಕ್ಕೆ ಪರಿಹಾರ ನೀಡಲು ಆಗುವುದಿಲ್ಲ ಎಂಬ ಕಾರಣವನ್ನು ತಿಳಿಸುತ್ತೇವೆ ಎಂದರು.

ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧದ ಮೇಲೆ ಜನರ ಸೇವೆಯೇ ಜನಾರ್ದನನ ಸೇವೆ ಎಂದು ಹೇಳುತ್ತಾರೆ. ನಾವು ನಿಮ್ಮನ್ನು ದೇವರಂತೆ ಕಂಡು ನಿಮ್ಮ ಸೇವೆ ಮಾಡುತ್ತೇವೆ. ಅದಕ್ಕಾಗಿ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಟಿ ಆಯಿತು. ಐದು ಗ್ಯಾರಂಟಿ ಯೋಜನೆಯಿಂದ ಜನರ ಕೈ ಗಟ್ಟಿಯಾಯಿತು. ನಿಮ್ಮ ಕೈ ಬಲಪಡಿಸಲು ನಾವು ಈ ಯೋಜನೆ ಕೊಟ್ಟು ಸೇವೆ ಮಾಡುತ್ತಿದ್ದೇವೆ ಎಂದರು.

ಇಲ್ಲಿನ ಶಾಸಕರುಗಳು ಪರಾಜಿತ ಅಭ್ಯರ್ಥಿಗಳು ಕೆಲವು ಮನವಿ ಸಲ್ಲಿಸಿದ್ದಾರೆ. ಅವರ ಅರ್ಜಿಗಳನ್ನು ನಮ್ಮ ಅಧಿಕಾರಿಗಳಿಗೆ ನೀಡಿದ್ದೇವೆ ಎಂದು ತಿಳಿಸಿದರು.

BIG NEWS: ಟೀಂ ಇಂಡಿಯಾ ಮಾಜಿ ನಾಯಕ ‘ಎಂ.ಎಸ್ ಧೋನಿ’ಗೆ 15 ಕೋಟಿ ವಂಚನೆ, ಪ್ರಕರಣ ದಾಖಲು

ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

1 Min Read

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

2 Mins Read

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

1 Min Read
Recent News

​ಪಾಕಿಸ್ತಾನದಲ್ಲಿ ಭೀಕರ ಅವಳಿ ಬಾಂಬ್ ಸ್ಫೋಟ: ಕನಿಷ್ಠ 7 ಜನರ ಸಾವು, ರಕ್ಷಣೆಗೆ ಧಾವಿಸಿದವರ ಮೇಲೂ ಕಿಡಿಗೇಡಿಗಳ ಅಟ್ಯಾಕ್!

ಅಲೋವೆರಾ ಆಧರಿತ ಕ್ರೀಮ್‌ಗಳು ಸೇರಿ 16 ಸಂಯೋಜಿತ ಔಷಧಿಗಳ ಉತ್ಪಾದನೆ ಮತ್ತು ಮಾರಾಟ ತಕ್ಷಣದಿಂದಲೇ ನಿಷೇಧಿಸಿದ ಕೇಂದ್ರ ಸರ್ಕಾರ!

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

BIG NEWS : `PF’ ಖಾತೆದಾರರೇ ಖಾತೆಗೆ ಬಡ್ಡಿ ಹಣ ಜಮೆಯಾಗಿದೆಯೇ? ಜಸ್ಟ್ ಮಿಸ್ಡ್ ಕಾಲ್ ಕೊಟ್ಟು ಹೀಗೆ ಚೆಕ್ ಮಾಡಿ!

State News
KARNATAKA

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

By kannadanewsnow57 KARNATAKA 1 Min Read

ವಿಜಯಪುರ: ಜಿಲ್ಲೆಯ ತಿಕೋಟ ತಾಲೂಕಿನ ಘೋನಸಗಿ ಗ್ರಾಮದಲ್ಲಿ ವಿಶಿಷ್ಟ ಹಾಗೂ ಅಪರೂಪದ ಖಗೋಳ ವಿಸ್ಮಯವೊಂದು ಸಂಭವಿಸಿದೆ. ಇಲ್ಲಿನ ಸರ್ಕಾರಿ ಕನ್ನಡ…

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

ಮನ್ಮುಲ್ ನಿಂದ ಕೆರೆಗೆ ಹರಿದ ರಾಸಾಯನಿಕಯುಕ್ತ ನೀರು: ಸಾವಿರಾರು ಮೀನುಗಳ ಮಾರಣಹೋಮ, ಲಕ್ಷಾಂತರ ರೂ. ನಷ್ಟ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.