ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಕುಮಾರಸ್ವಾಮಿ ನಿವಾಸದಲ್ಲಿ ಜೆಡಿಎಸ್ ನ ಮಹತ್ವದ ಸಭೆ ನಡೆಯಿತು ಈ ಒಂದು ಸಭೆಯಲ್ಲಿ ಮಂಡ್ಯ ಹಾಸನ ಹಾಗೂ ಕೋಲಾರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತಂತೆ ಚರ್ಚೆ ನಡೆಸಲಾಯಿತು.
ಮಂಡ್ಯ ಕ್ಷೇತ್ರಕ್ಕೆ ಸುಮಲತಾಗೆ ಟಿಕೇಟ್ ಮಿಸ್ ವಿಚಾರ : ನಾಳೆ ಆಪ್ತರು-ಬೆಂಬಲಿಗರ ಜೊತೆ ಮಹತ್ವದ ಸಭೆ
ನಾಡಿನ ರೈತರ ಹಿತಕ್ಕಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ. ಪ್ರಾದೇಶಿಕ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿಲ್ಲ.ಪ್ರಾದೇಶಿಕ ಪಕ್ಷವಾಗಿ ನಮಗೆ ಜನ ಬೆಂಬಲ ನೀಡಿಲ್ಲ ನೆರೆ ರಾಜ್ಯಗಳಿಗೆ ಅನ್ಯಾಯವಾಗದಂತೆ ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸಿ. ನಾಡಿನ ಬಿಜೆಪಿ ಸಂಸದರಿಗೆ ಧ್ವನಿ ಇಲ್ಲ ಎಂಬ ಆರೋಪ ಇದೆ. ಸ್ವತಂತ್ರವಾಗಿ ಆಡಳಿತವನ್ನು ನಡೆಸುವ ಅಧಿಕಾರ ನಮಗೆ ಸಿಕ್ಕಿಲ್ಲ ಎಂದು ಅವರು ಬೇಸರ ಹೊರಹಾಕಿದರು.
ಮೋದಿ ನಿವಾಸಕ್ಕೆ ಘೇರಾವ್ : ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸ್ತಿದ್ದ ಎಎಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ
ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಾವು ಮೂರೂ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ಮಂಡ್ಯ ಹಾಸನ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ, ದೇಶದಲ್ಲೆಡೆ ಮೋದಿ ಅಲೆ ಇದೆ ಹೀಗಾಗಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುತ್ತಾರೆ ಎಂದರು.
ದೇಶಾದ್ಯಂತ 6000 ಉದ್ಯೋಗಿಗಳನ್ನು ವಜಾಗೊಳಿಸಿದ ‘DELL’ ಕಂಪನಿ | Lay offs
ರಾಜ್ಯದಲ್ಲಿ ನೀರಾವರಿ ಯೋಜನೆ ವಿಚಾರಗಳಲ್ಲಿ ರೈತರಿಗೆ ತುಂಬಾ ಅನ್ಯಾಯವಾಗಿದೆ.ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತದಲ್ಲಿ ಇದ್ದಾಗ ರೈತರನ್ನು ನಿರ್ಲಕ್ಷ ಮಾಡಿದೆ. ಇದೀಗ ನರೇಂದ್ರ ಮೋದಿ ಸರ್ಕಾರ ಬಂದ ಮೇಲೆ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ಗೂಬೆಕೂರಿಸುತ್ತಿದೆ.ಕೇವಲ ಶಂಕುಸ್ಥಾಪನೆ ನೆರವೇರಿಸಿದ್ದಷ್ಟೆ ಕಾಂಗ್ರೆಸ್ ನ ಕೀರ್ತಿ ಎಂದು ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.