ಬೆಳಗಾವಿ : 60 ವರ್ಷ ಕಾಂಗ್ರೆಸ್ ನವರ ( Congress ) ಆಡಳಿತವನ್ನು ಜನ ನೋಡಿದ್ದಾರೆ. ಯಾವ ಭಾಗ್ಯವೂ ಜನರನ್ನು ಮುಟ್ಟಲಿಲ್ಲ. ಕಾಂಗ್ರೆಸ್ ನ ದುರಾಡಳಿತ ಮತ್ತು ಅವರ ದೌರ್ಬಾಗ್ಯ ಜನರಿಗೆ ಬೇಡವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ಅವರು ಇಂದು ಬೆಳಗಾವಿ ಜಿಲ್ಲೆಯ ರಾಯಬಾಗನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಅಕ್ಕಿಗೆ ಸಿದ್ದರಾಮಯ್ಯ ಚೀಲದ ಮೇಲೆ ತಮ್ಮ ಫೋಟೊ ಹಾಕಿಸಿಕೊಂಡರು ಅನ್ನದಲ್ಲಿ ಕನ್ನ ಹಾಕುವ ಮೂಲಕ ಅದರಲ್ಲೂ ಲೂಟಿ ಮಾಡಿದರು. ಸಣ್ಣ ನೀರಾವರಿ ಯೋಜನೆಯಲ್ಲಿ ಕಾಮಗಾರಿ ಮಾಡದೇ ಬಿಲ್ ತೆಗೆದರು. ಬೆಂಗಳೂರು, ಮಂಗಳೂರು, ಬಳ್ಳಾರಿಯಲ್ಲಿ ಮಣ್ಣಿನಲ್ಲೂ ತಿಂದರು. ಅವರ ಆಡಳಿತಾವಧಿಯಲ್ಲಿ ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂದು ಹೋದರು. ಕಾಂಗ್ರೆಸ್ ನ ದುರಾಡಳಿತ ಮತ್ತು ಅವರ ದೌರ್ಬಾಗ್ಯ ಜನರಿಗೆ ಬೇಡವಾಗಿದೆ. ಕಾಂಗ್ರೆಸ್ ನವರು ಅಧಿಕಾರದಲ್ಲಿ ಇದ್ದಾಗ ಸ್ವಂತ ಲಾಭಕ್ಕಾಗಿ ಹಾಗೂ ಸ್ವಾರ್ಥಕ್ಕಾಗಿ ಮಾಡಿಕೊಳ್ಳುತ್ತಾರೆ. ಜನರು ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದಾರೆ ಎಂದರು.
ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಜಗಳವೇ ಇನ್ನೂ ಮುಗಿದಿಲ್ಲ. ಖರ್ಗೆಯವರು ಎಐಸಿಸಿಯ ಮುಳುಗುವ ದೋಣಿಯ ಅಧ್ಯಕ್ಷರಾದ ತಕ್ಷಣ, ಬೆಳಗಾವಿ ಶಾಸಕರಾದ ಸತೀಶ್ ಜಾರಕಿಹೊಳಿ ಹಿಂದೂ ಅಂದರೆ ಹೊಲಸು ಅಂತ ಹೇಳ್ತಾರೆ. ಅವರಿಗೆ ಈ ರೀತಿಯ ಮಾತನಾಡಲು ಮನಸ್ಸು ಹೇಗೆ ಬಂತು ತಿಳಿಯುತ್ತಿಲ್ಲ. ನಮ್ಮ ಸನಾತನ ಧರ್ಮ ಯಾವುದೇ ಜಗತ್ತಿನಲ್ಲಿ ಯಾವುದೇ ಧರ್ಮ ಹುಟ್ಟಿರಲಿಲ್ಲಾ ಆಗಲೇ ಸಿಂಧೂ ಸಂಸ್ಕೃತಿ ಹಿಂದು ಧರ್ಮವಾಗಿ ಬೆಳೆದಿದೆ. ಇಡೀ ಮನುಕುಲವೊಂದೇ ಎಂದು ಸಾರುವ ಹಿಂದೂ ಧರ್ಮದ ಬಗ್ಗೆ ಕ್ಲುಲ್ಲಕವಾಗಿ ಮಾತನಾಡಿದ್ದಾರೆ ಎಂದರು.
ಕಾಂಗ್ರೆಸ್ ಗೆ ಕೆಟ್ಟ ಕಾಲ ಬಂದಿದೆ
ರಾಹುಲ್ ಗಾಂಧಿ ಚುನಾವಣೆ ಬಂದಾಗ ದೇವಸ್ಥಾನ ಕ್ಕೆ ಹೋಗುತ್ತಾರೆ.ಸಿದ್ದರಾಮಯ್ಯ ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತಾರೆ. ನಮ್ಮದು ಸಮಾಜವನ್ನು ಜೋಡಿಸುವ ಕೆಲಸವಾದರೆ, ಕಾಂಗ್ರೆಸ್ ಅವರದು ಅಧಿಕಾರಕ್ಕಾಗಿ ದೇಶ ಒಡೆಯುವ ಕೆಲಸ, ಕರ್ನಾಟಕದ ಅಧಿಕಾರಕ್ಕಾಗಿ ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಭಾರತ ಜೋಡೊ ಯಾತ್ರೆ ಎನ್ನುತ್ತಾರೆ ಆದರೆ ಭಾರತ ಈಗಾಗಲೇ ಒಂದಾಗಿದೆ. ನೀವು ಜೋಡೊ ಅಂತಿರಿ ಇಲ್ಲಿ ಸತೀಶ್ ಜಾರಕಿಹೊಳಿ ತೋಡೊ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಗೆ ಕೆಟ್ಟ ಕಾಲ ಬಂದಿದೆ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಬೈರತಿ ಬಸವರಾಜ, ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ದುರ್ಯೋಧನ ಐಹೊಳೆ, ಪಿ. ರಾಜೀವ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ರವಿಕುಮಾರ್, ಮಾಜಿ ಸಂಸದರಾದ ರಮೇಶ್ ಕತ್ತಿ, ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ ಮತ್ತಿತರರು ಹಾಜರಿದ್ದರು.