ವರದಿ : ವಸಂತ ಬಿ ಈಶ್ವರಗೆರೆ
ಬೆಂಗಳೂರು: ಗೌರಿ ಗಣೇಶ ಹಬ್ಬದ ( Gowri Ganesha Festival ) ಪ್ರಯುಕ್ತ ವಿವಿಧ ಊರುಗಳಿಗೆ ತೆರಳುವಂತ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ಕೆ ಎಸ್ ಆರ್ ಟಿ ಸಿಯಿಂದ 500 ಹೆಚ್ಚುವರಿ ಬಸ್ ಗಳ ವಿಶೇಷ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು, ದಿನಾಂಕ 30-08-2022 ಮತ್ತು 31-08-2022ರಂದು ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 29-08-2022 ಮತ್ತು 30-08-2022ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಯಾವ ಬಸ್ ನಿಲ್ದಾಣದಿಂದ ಏಲ್ಲೆಲ್ಲಿಗೆ ಕೆ ಎಸ್ ಆರ್ ಟಿ ಸಿ ವಿಶೇಷ ಸಾರಿಗೆ ವ್ಯವಸ್ಥೆ ಗೊತ್ತಾ.?
* ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣೆಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾರ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಕಾರ್ಯಾಚರಣೆ
* ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ವಿಶೇಷ ಬಸ್ ಸಂಚಾರ ವ್ಯವಸ್ಥೆ
* ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಚೈನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಪ್ರತಿಷ್ಠಿತ ಸಾರಿಗೆ ಬಸ್ ವ್ಯವಸ್ಥೆ
* ಬೆಂಗಳೂರಿನ ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ರಾಜಾಜಿನಗರದ ನವರಂಗ್, ಮಲ್ಲೇಶ್ವರಂ 18ನೇ ಕ್ರಾಸ್, ಬನಶಂಕರಿ, ಜೀವನ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಹ್ಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕಲ್ಪಿಸಿರುವಂತ ಹೆಚ್ಚುವರಿ ಸಾರಿಗೆ ಬಸ್ ಗಳಿಗೆ ( KSRTC Bus ) ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸೋದಕ್ಕಾಗಿ www.ksrtc.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ಮಾಡಬಹುದಾಗಿದೆ.
ಪ್ರಯಾಣಿಕರ ಬುಕ್ಕಿಂಗ್ ಗೆ ಅನುಕೂಲವಾಗುವ ನಿಟ್ಟಿನಲ್ಲಿ 691 ಗಣಕೀಕೃತ ಬುಕ್ಕಿಂಗ್ ಕೌಂಟರ್ ಗಳಿದ್ದು, ಅಲ್ಲಿಯೂ ಗೌರಿಗಣೇಶ ಹಬ್ಬಕ್ಕೆ ತೆರಳೋರು ಮುಂಗಡ ಆಸನಗಳ ಕಾಯ್ದಿರಿಸುವಿಕೆಯನ್ನು ಮಾಡಬಹುದು.
ಮುಂಗಡ ಟಿಕೆಟ್ ಖರೀದಿಸಿದ್ರೇ ಶೇ.5ರಿಂದ 10ರಷ್ಟು ರಿಯಾಯಿತಿ
ಗಣೇಶ ಚತುರ್ಥಿಗೆ ತೆರಳೋದಕ್ಕಾಗಿ ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸ್ದೇರ, ಶೇ.5ರಷ್ಟು ರಿಯಾಯಿತಿ ಕೂಡ ನೀಡಲಾಗುತ್ತಿದೆ. ಇದಷ್ಟೇ ಅಲ್ಲದೇ ಹೋಗುವ ಹಾಗೂ ಬರುವ ಪ್ರಯಾಣದ ಟಿಕೆಟ್ ಗಳನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ, ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ಕೂಡ ನೀಡಲಾಗುತ್ತದೆ.