ರಾಮನಗರ : ಜನರ ಮಧ್ಯೆ ಇರುವ ಕ್ರಿಯಾಶೀಲ ರಾಜಕಾರಣಿ ಡಿ.ಕೆ.ಸುರೇಶ್ ಬೇಕೆ ಹೊರತು ವೈಟ್ ಕಾಲರ್ ರಾಜಕಾರಣಿ ಡಾ.ಸಿ.ಎನ್. ಮಂಜುನಾಥ್ ಬೇಡ ಎಂಬುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಂಡ್ಯದಲ್ಲಿ ನಾನು ಸೋಲುತ್ತೇನೆ ಎಂದು ‘ಸಿಎಂ’ ಸಿದ್ದರಾಮಯ್ಯ ‘ಜೋತಿಷ್ಯ’ ಹೇಳಲು ಶುರು ಮಾಡಿದ್ದಾರೆ : HDK ವ್ಯಂಗ್ಯ
ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ನನಗೆ ಪ್ರತಿನಿತ್ಯ ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಡಿ.ಕೆ.ಸುರೇಶ್ ಅವರು ಗೆಲವು ಸಾಧಿಸುವುದು ಶತಸಿದ್ದ. ಸಂಸದರಾದರು ಡಿ.ಕೆ.ಸುರೇಶ್ ಪಂಚಾಯಿತಿ ಸದಸ್ಯನಂತೆ ಜನ ಸಂಪರ್ಕ ಸಾಧಿಸಿದ್ದಾರೆ.
BIG NEWS : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ‘ಮುಜಾಮಿಲ್ ಪಾಷಾ’ 7 ದಿನ ‘NIA’ ವಶಕ್ಕೆ
ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ದುಡಿಯುವ ಆ ವ್ಯಕ್ತಿಯನ್ನು ಪ್ರತಿನಿಧಿಯಾಗಿ ದೆಹಲಿಗೆ ಕಳುಹಿಸಿದರೆ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು. ಈ ಕ್ಷೇತ್ರದಲ್ಲಿ ಬಿಜೆಪಿಯವರಿಗೆ ಅಭ್ಯರ್ಥಿ ಸಿಗಲಿಲ್ಲ. ಮಾಜಿ ಪ್ರಧಾನಿ ದೇವೇಗೌಡರ ಅಳಿಯ ಅಂತ ಡಾ.ಸಿ.ಎನ್. ಮಂಜುನಾಥ್ ಅವರನ್ನು ಕರೆತಂದು ನಿಲ್ಲಿಸಿದ್ದಾರೆ.
ಪೋಷಕರೊಂದಿಗೆ ವಾಸಿಸಲು ಪ್ರತಿ ತಿಂಗಳು 40,000 ರೂ.ಗಳ ‘ಬಾಡಿಗೆ’ ಪಾವತಿಸಿದ ಯುಕೆ ವ್ಯಕ್ತಿ
ಅವರು ಸರ್ಕಾರಿ ನೌಕರಿಯಲ್ಲಿದ್ದರೆ ಹೊರತು ರಾಜಕಾರಣದಲ್ಲಿ ಇರಲಿಲ್ಲ. ಎಂದಾದರು ಜನರ ಸೇವೆ ಮಾಡಿದ್ದಾರಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಜನರ ಕಷ್ಟಸುಖಗಳಿಗೆ ಸ್ಪಂದಿಸುವ ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ರಾಜಕಾರಣಿ ಮಂಜುನಾಥ್ ಬೇಕೊ ಎಂಬುದನ್ನು ಜನರು ತೀರ್ಮಾನ ಮಾಡಿ ಆಗಿದೆ ಎಂದು ಹೇಳಿದರು.