ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸಿಎಂ ಸಿದ್ಧರಾಮಯ್ಯಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ ಬರೆದಿದ್ದರು. ಸಿಎಂ ಗೆ ಪತ್ರ ಬರೆದ ಬೆನ್ನಲ್ಲೆ ಪ್ರಿಯಾಂಕ ಖರ್ಗೆ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬಂದಿವೆ. ಈ ವಿಚಾರವಾಗಿ ಹೆಚ್ ವಿಶ್ವನಾಥ್ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದು, ನಿಮ್ಮಪ್ಪನಂತೆ ಕೆಲಸ ಮಾಡಲು ಜನ ನಿನ್ನನ್ನು ಗೆಲ್ಲಿಸಿದ್ದಾರೆ. ಪ್ರಿಯಾಂಕ ಖರ್ಗೆಗೆ ಬೆದರಿಕೆ ಕರೆ ಬರುತ್ತಿರುವುದು ಶುದ್ಧ ಸುಳ್ಳು ಎಂದು ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ನಿಮ್ಮಪ್ಪನಂತೆ ಒಳ್ಳೆಯ ಕೆಲಸ ಮಾಡು ಎಂದು ಜನ ನಿನ್ನನ್ನು ಗೆಲ್ಲಿಸಿದ್ದಾರೆ. ಆದರೆ ನೀನು ಕೆಲಸಕ್ಕೆ ಬಾರದ ವಿಚಾರಗಳನ್ನು ಮಾತನಾಡಿಕೊಂಡು ರಾಷ್ಟ್ರೀಯ ನಾಯಕ ಎಂದು ಬಿಂಬಿಸಿಕೊಳ್ಳಲು ಹೊರಟಿದ್ದೀಯ. ಮಲ್ಲಿಕಾರ್ಜುನ ಖರ್ಗೆ ಮಗನಿಗೆ ಯಾರು ಬೆದರಿಕೆ ಹಾಕುತ್ತಾರೆ? ಇದು ಬರಿ ಸುಳ್ಳಿನಿಂದ ಕೂಡಿದೆ. ನಾನು ಸಹ ಸಿದ್ದರಾಮಯ್ಯ ವಿರುದ್ಧ ಎಷ್ಟೋ ಬಾರಿ ಟೀಕೆ ಮಾಡಿದ್ದೇನೆ. ಆದರೆ ಇದುವರೆಗೂ ನನಗೆ ಕರೆ ಮಾಡಿ ಯಾರು ಬೆದರಿಕೆ ಹಾಕಿಲ್ಲ. ಪ್ರಶ್ನೆಯು ಮಾಡಿಲ್ಲ. ಪ್ರಿಯಾಂಕ ಖರ್ಗೆಗೆ ಬೆದರಿಕೆ ಕರೆ ಬಂದಿದೆ ಅನ್ನೋದು ಶುದ್ಧ ಸುಳ್ಳು ಎಂದು ಮೈಸೂರಿನಲ್ಲಿ ಪ್ರಿಯಾಂಕ ಖರ್ಗೆ ವಿರುದ್ಧ ಹೆಚ್.ವಿಶ್ವನಾಥ ವಾಗ್ದಾಳಿ ನಡೆಸಿದರು.