ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವಂತ ಕಬ್ಬನ್ ಪಾರ್ಕ್ ನಲ್ಲಿ ಸಾರ್ವಜನಿಕರು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ಆದರೇ ಇನ್ಮುಂದೆ ಹೀಗೆ ಕಾರ್ಯಕ್ರಮ ಆಯೋಜಿಸಲು ಅನುಮತಿ ಕಡ್ಡಾಯವಾಗಿದೆ.
ಈ ಕುರಿತಂತೆ ತೋಟಗಾರಿಕಾ ಇಲಾಖೆ ಮಾಹಿತಿ ನೀಡಿದ್ದು, 20ಕ್ಕಿಂತ ಹೆಚ್ಚು ಜನರು ಕಬ್ಬನ್ ಪಾರ್ಕ್ ನಲ್ಲಿ ಕಾರ್ಯಕ್ರಮ ಆಯೋಜಿಸುವುದಿದ್ದರೇ ಇಲಾಖೆಯಿಂದ ಅನುಮತಿ ಪಡೆಯುವಂತೆ ತಿಳಿಸಿದೆ.
ಒಟ್ಟಾರೆಯಾಗಿ ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ಕಡ್ಡಾಯಗೊಳಿಸಲಾಗಿದೆ. 20ಕ್ಕಿಂತ ಹೆಚ್ಚು ಜನ ಸೇರುವುದಾದರೆ ಪೊಲೀಸ್, ತೋಟಗಾರಿಕೆ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಇಲ್ಲವಾದಲೇ ನಿಮ್ಮ ಮೇಲೆ ಕಾನೂನು ಕ್ರಮವನ್ನು ಇಲಾಖೆ ಜರುಗಿಸಲಿದೆ.
ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ಕಡ್ಡಾಯಗೊಳಿಸಲಾಗಿದೆ. 20ಕ್ಕಿಂತ ಹೆಚ್ಚು ಜನ ಸೇರುವುದಾದರೆ ಪೊಲೀಸ್, ತೋಟಗಾರಿಕೆ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. #CubbonPark pic.twitter.com/nElfOiDN09
— DIPR Karnataka (@KarnatakaVarthe) December 24, 2024
Crime News: ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಓರ್ವ ಮನೆಗಳ್ಳ ಅರೆಸ್ಟ್, ಚಿನ್ನಾಭರಣ ಸೀಜ್