ದಾವಣಗೆರೆ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹೀಗಾಗಿ ಜಿಲ್ಲೆಯ ಜಗಳೂರು ತಾಲೂಕಿನ ಮುಸ್ಟೂರು ಗ್ರಾಮದಲ್ಲಿ ಮಳೆಗೆ ಮನೆ ಗೋಡೆ ಕುಸಿತಗೊಂಡು ವೃದ್ಧ ದಂಪತಿಗೆ ಗಂಭೀರ ಗಾಯವಾಗಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
BIGG NEWS: ಚಿಕ್ಕಬಳ್ಳಾಪುರದಲ್ಲಿ ನಿಲ್ಲದ ಮಳೆಯ ಅವಾಂತರ: ನಂದಿಬೆಟ್ಟದ ಎರಡು ಕಡೆ ಗುಡ್ಡ ಕುಸಿತ; ಆತಂಕದಲ್ಲಿ ಜನರು
ಇನ್ನು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯತ್ತಲೇ ಇದೆ. ಇದರಿಂದ ಅವಾಂತರ ಸೃಷ್ಟಿಯಾಗಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ರಸ್ತೆಗಳು, ಕೆರೆಗಳೆಲ್ಲ ತುಂಬಿ ಉಕ್ಕಿ ಹರಿಯುತ್ತಿದ್ದರಿಂದ ಗದ್ದೆ, ತೋಟಗಳಿಗೆ ನೀರು ನುಗ್ಗಿ ಜಲಾವೃತಗೊಂಡಿದೆ. ಹೀಗಾಗಿ ರೈತರಿಗೆ ಸಂಕಷ್ಟ ಎದುರಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಅನ್ನೋ ಹಾಗೆ ಆಗಿದೆ ರೈತರಿಗೆ .