ಕಲಬುರ್ಗಿ : ಕಲ್ಬುರ್ಗಿಯಲ್ಲಿ ಕಳೆದ 48 ಗಂಟೆಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಪ್ರಿಯಾಂಕ ಖರ್ಗೆ ಭೇಟಿ ನೀಡಿದ್ದಾರೆ. ಹಳೆ ಹೆಬ್ಬಾಳ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಭೇಟಿ ನೀಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಜಿಲ್ಲೆಯ ಬೆಣ್ಣೆತೋರ ಜಲಾಶಯದ ನೀರಿನಿಂದ ಇಡಿ ಗ್ರಾಮ ಮುಳುಗಡೆಯಾಗಿದೆ. ಗ್ರಾಮಸ್ಥರನ್ನು ಬೇರೆ ಕಡೆಗೆ ಶಾಶ್ವತವಾಗಿ ಶಿಫ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ. ಈ ವೇಳೆ ಗ್ರಾಮಸ್ಥರ ಸಭೆ ಕರೆದು ಒಪ್ಪಿಗೆ ಪಡೆದು ಶಾಶ್ವತ ಪರಿಹಾರಕ್ಕೆ ಸೂಚಿಸಿದ್ದಾರೆ.
ಇನ್ನು ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಂಕಂಚಿ ಗ್ರಾಮಕ್ಕೆ ಭೀಮಾ ನದಿಯ ನೀರು ನುಗ್ಗಿದೆ. ಬಸವೇಶ್ವರ ದೇವಸ್ಥಾನ, ಮಹಾಲಕ್ಷ್ಮಿ ದೇವಸ್ಥಾನ ಸಂಪೂರ್ಣವಾಗಿ ಜಲಾವೃತವಾಗಿದೆ. ದೋಣಿಯಲ್ಲಿ ಹೋಗಿ ಗ್ರಾಮಸ್ಥರು ಪೂಜೆ ಸಲ್ಲಿಸಿದ್ದಾರೆ. ನದಿ ನೀರು ಉಕ್ಕಿ ಹರಿಯುತ್ತಿದ್ದರು ಕೂಡ ಭಿಮಾನದಿಯಲ್ಲಿ ದೋಣಿಯಲ್ಲಿ ಹೋಗಿ ಪೂಜೆ ಸಲ್ಲಿಸಿದ್ದಾರೆ.