Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪಾಕಿಸ್ತಾನ ಪರ’ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ- ಜೆ.ಪಿ.ನಡ್ಡಾ ಕಿಡಿ
KARNATAKA

‘ಪಾಕಿಸ್ತಾನ ಪರ’ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ- ಜೆ.ಪಿ.ನಡ್ಡಾ ಕಿಡಿ

By kannadanewsnow0905/03/2024 2:33 PM

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು.

ಚಿಕ್ಕೋಡಿಯಲ್ಲಿ ಇಂದು ಬಿಜೆಪಿ ಬೂತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಕಿಸ್ತಾನದ ಪರ ಇರುವವರನ್ನು ಭಾರತಮಾತೆ ಎಂದೂ ಕ್ಷಮಿಸುವುದಿಲ್ಲ ಎಂದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಸರಕಾರ ಇದ್ದಾಗ ಶಾಂತ ಪರಿಸ್ಥಿತಿ ನೆಲೆಸಿತ್ತು. ಈಗ ಬಾಂಬ್ ಸ್ಫೋಟಿಸುತ್ತಿದೆ ಎಂದು ಅವರು ಗಮನ ಸೆಳೆದರು.

ಬಡವರು, ಮಹಿಳೆಯರು (ನಾರಿಶಕ್ತಿ), ರೈತರು, ಯುವಜನತೆಯ ಆಶಯಗಳನ್ನು ಈಡೇರಿಸಿದ ಪಕ್ಷವಾಗಿ ಬಿಜೆಪಿ ಬೆಳೆದಿದೆ. ಬಿಜೆಪಿ ಸಿದ್ಧಾಂತ ಆಧರಿಸಿದ ಪಕ್ಷ. ಮುಸ್ಲಿಮ್ ಮಹಿಳೆಯರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ನಾವು ಹೇಳಿದ್ದೆವು. ತ್ರಿವಳಿ ತಲಾಖ್ ಪದ್ಧತಿಯನ್ನು ನಾವು ರದ್ದು ಮಾಡಿದ್ದೇವೆ. ಆದರೆ, ಕಾಂಗ್ರೆಸ್ ಪಕ್ಷ ತುಷ್ಟೀಕರಣದ ಕಾರಣಕ್ಕಾಗಿ ಈ ಕಡೆ ಗಮನ ಹರಿಸಿರಲಿಲ್ಲ ಎಂದು ವಿವರಿಸಿದರು.

ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷ ನಮ್ಮದು. ಅಣ್ಣಾಸಾಹೇಬ್ ಜೊಲ್ಲೆಯವರು ಸೇರಿ 303 ಸಂಸದರು ನಮ್ಮ ಪಕ್ಷದವರು ಲೋಕಸಭೆಯಲ್ಲಿದ್ದಾರೆ. ನಮ್ಮ ಯುವಜನರಿಗೆ ತರಬೇತಿ ನೀಡಿ ಪ್ರಧಾನಿ ಮೋದಿಯವರು ಆತ್ಮನಿರ್ಭರರನ್ನಾಗಿ ಮಾಡಿದ್ದಾರೆ ಎಂದು ತಿಳಿಸಿದರು.

ವಿಕಸಿತ ಭಾರತ ಸಂಕಲ್ಪದಲ್ಲಿ ತಮ್ಮನ್ನು ತೊಡಗಿಕೊಳ್ಳುವಂತೆ ಮೋದಿಜೀ ಅವರು ಯುವಜನರಿಗೆ ಪ್ರೋತ್ಸಾಹ ಕೊಟ್ಟಿದ್ದಾರೆ ಎಂದ ಅವರು, ಕಾಂಗ್ರೆಸ್ ಭ್ರಷ್ಟಾಚಾರ, ಕಮಿಷನ್, ಕೌಟುಂಬಿಕವಾದದ ಪಕ್ಷ. 10 ವರ್ಷಗಳ ಹಿಂದೆ ಭಾರತವನ್ನು ಅಸಮರ್ಪಕ ನೀತಿಯುಳ್ಳ ದೇಶವಾಗಿ ನೋಡಲಾಗುತ್ತಿತ್ತು. ಸಮರ್ಥ ನಿರ್ಧಾರ ತೆಗೆದುಕೊಳ್ಳಲಾಗದ ದೇಶ ಎಂದೇ ಭಾರತವನ್ನು ಬಿಂಬಿಸುವ ಸ್ಥಿತಿ ಹಿಂದೆ ಇತ್ತು. 2014ರ ಬಳಿಕ ಮೋದಿಯವರ ನೇತೃತ್ವದಲ್ಲಿ ಭಾರತವು ಆತ್ಮವಿಶ್ವಾಸ ಹೊಂದಿದ ವಿಶ್ವಕ್ಕೇ ದೂರದೃಷ್ಟಿ ಕೊಡುವ ದೇಶವಾಗಿ ಬೆಳೆದುನಿಂತಿದೆ ಎಂದು ನುಡಿದರು.

ಸ್ವಾವಲಂಬಿ, ವಿಶ್ವಾಸಯುಕ್ತ ಜನರಿರುವ ದೇಶವನ್ನಾಗಿ ಭಾರತವನ್ನು ಮೋದಿಯವರು ಪರಿವರ್ತಿಸಿದ್ದಾರೆ. ಆತ್ಮನಿರ್ಭರ ದೇಶವಾಗಿ ಅದು ಬದಲಾಗುತ್ತಿದೆ. ಪ್ರಧಾನಿಯವರು ದೇಶವನ್ನು ಆತ್ಮವಿಶ್ವಾಸವುಳ್ಳ ರಾಷ್ಟ್ರವಾಗಿ ಪರಿವರ್ತಿಸಿದ್ದನ್ನು ನಾವು ಜನತೆಯ ಮುಂದಿಡಬೇಕು ಎಂದು ಮನವಿ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಲೋಕಸಭಾ ಚುನಾವಣೆಗೆ ಕೇವಲ 50-60 ದಿನಗಳು ಮಾತ್ರ ಬಾಕಿ ಇದೆ. ಬಿಜೆಪಿ- ಜೆಡಿಎಸ್ ಒಂದಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲಲು ಶಪಥ ಮಾಡಿ ಹೊರಟಿದ್ದೇನೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲಿಸಲು ಮನವಿ ಮಾಡಿದರು. 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಭರವಸೆಯನ್ನು ನಡ್ಡಾಜೀ ಅವರಿಗೆ ನೀಡುವುದಾಗಿ ವಿಶ್ವಾಸದಿಂದ ನುಡಿದರು.

ರೈತರ ಸಂಕಷ್ಟಕ್ಕೆ ರಾಜ್ಯ ಸರಕಾರ ಸ್ಪಂದಿಸುತ್ತಿಲ್ಲ. ಆದರೆ, ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ಕೆ ಮುಖ್ಯಮಂತ್ರಿಗಳು 10 ಸಾವಿರ ಕೋಟಿ ಅನುದಾನವನ್ನು ಪ್ರಕಟಿಸಿದ್ದಾರೆ. ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರಕಾರದ ಬಳಿ ಹಣ ಇಲ್ಲ. ಆದರೆ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಅದು ಮುಂದಾಗಿದೆ ಎಂದು ಟೀಕಿಸಿದರು.

ಹಿಂದೂಗಳು ದಾನವಾಗಿ ಕೊಟ್ಟ 2 ಎಕರೆ ಜಾಗದಲ್ಲಿ ಆರಂಭಿಸಿದ್ದ ಪಶು ಆಸ್ಪತ್ರೆಯನ್ನು ಜಮೀರ್ ಅಹ್ಮದ್ ಅವರು ಕಿತ್ತುಕೊಂಡು ಅಲ್ಪಸಂಖ್ಯಾತರಿಗೆ ಕೊಡುತ್ತಿದ್ದಾರೆ. ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ತಕ್ಕ ಉತ್ತರವನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಕೊಡಬೇಕಿದೆ ಎಂದು ಮನವಿ ಮಾಡಿದರು.

ರಾಜ್ಯಸಭಾ ಚುನಾವಣೆಯ ಬಳಿಕ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಬಿಜೆಪಿ ಹೋರಾಟದ ಬಳಿಕ ನಿನ್ನೆ ಮೂವರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಕಿಂಚಿತ್ತಾದರೂ ದೇಶಪ್ರೇಮ ಇದ್ದರೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಶಕ್ತಿ ನೀಡಿದ ರಾಜ್ಯಸಭಾ ಎಂ.ಪಿ. ನಾಸೀರ್ ಹುಸೇನ್ ವಿರುದ್ಧ ಕೂಡ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ, ಶಾಸಕ ರಮೇಶ್ ಕತ್ತಿ, ಮಾಜಿ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ್ ಅಪ್ಪಾಜಿಗೋಲ್, ಲೋಕಸಭಾ ಚುನಾವಣೆ ರಾಜ್ಯ ಉಸ್ತುವಾರಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್‍ವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಪಿ. ರಾಜೀವ್, ಶಾಸಕ ಮಹೇಶ್ ಟೆಂಗಿನಕಾಯಿ, ಮಾಜಿ ಶಾಸಕ ಅನಿಲ್ ಬೆನಕೆ, ನಿಕಟಪೂರ್ವ ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವಣಾಚೆ, ವಿಭಾಗ ಸಹ ಪ್ರಭಾರಿ ಬಸವರಾಜ ಯಂಕಂಚಿ, ಎಸ್‍ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ, ವಿಧಾನಪರಿಷತ್ ಮಾಜಿ ಸದಸ್ಯ ಮಹಂತೇಶ್ ಕವಟಗಿಮಠ, ಮಾಜಿ ಶಾಸಕ ಅಭಯ್ ಪಾಟೀಲ್, ಶಾಸಕರಾದ ದುರ್ಯೋಧನ ಐಹೊಳೆ, ನಿಖಿಲ್ ಕತ್ತಿ, ಮಾಜಿ ಶಾಸಕ ಶ್ರೀಮಂತ ಪಾಟೀಲ್, ಮಾಜಿ ಶಾಸಕ ಮಹೇಶ್ ಕುಮಟ್ಟಳ್ಳಿ , ವಿಭಾಗ ಪ್ರಭಾರಿ ಚಂದ್ರಶೇಖರ್ ಕವಟಗಿ, ಶಾಸಕ ಅಭಯ್ ಪಾಟೀಲ್, ಮಾಜಿ ಸಚಿವ ಮತ್ತು ರಾಜ್ಯ ಉಪಾಧ್ಯಕ್ಷ ಹನುಮಂತ ನಿರಾಣಿ ಮತ್ತಿತರ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು.

ನನಗೆ ದೇಶವೇ ಮೊದಲು, ಅವರಿಗೆ ಕುಟುಂಬವೇ ಮೊದಲು: ವಿಪಕ್ಷಳಿಗೆ ತಿವಿದ ಪ್ರಧಾನಿ ನರೇಂದ್ರ ಮೋದಿ

ಮಾರ್ಚ್14 ಅಥವಾ 15 ರಂದು ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, 7 ಹಂತಗಳಲ್ಲಿ ಮತದಾನ: ವರದಿ

Share. Facebook Twitter LinkedIn WhatsApp Email

Related Posts

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM1 Min Read

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM1 Min Read

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM1 Min Read
Recent News

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM
State News
KARNATAKA

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0901/07/2025 9:56 PM KARNATAKA 1 Min Read

ಬೆಂಗಳೂರು: ದಶಕದ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಯುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸೌಧದಲ್ಲಿ…

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM

ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ

01/07/2025 9:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.