ಬೆಂಗಳೂರು : ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಲಿಂಗಾಯತ ಧರ್ಮ ವಿಚಾರದಲ್ಲಿ ಪಶ್ಚಾತ್ತಾಪವಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಲಿಂಗಾಯತ ಧರ್ಮದ ವಿಚಾರದಲ್ಲಿ ಏನಾಯಿತು ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಜಗದ್ಗುರುಗಳ ನಡುವೆ ನಡೆದಿರುವ ಮಾತುಕತೆ ಅದು. ರಂಭಾಪುರಿ ಪೀಠದ ಶ್ರೀ ಪ್ರಸನ್ನ ವೀರ ಸೋಮೇಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪಶ್ಚಾತ್ತಾಪವಾಗಿದೆ ಎಂದು ಹೇಳಿದ್ದಾರೆಂದು ಶ್ರೀಗಳು ಹೇಳಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ಅವರೂ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ಅವರುವ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಆದ ಕಾರಣ ಏನೂ ಹೇಳುವುದಿಲ್ಲ . ಆದರೆ ಆ ಸಂದರ್ಭದಲ್ಲಿ ಏನು ನಡೆಯಿತು ಎಂದ ಸತ್ಯ ಎಲ್ಲರಿಗೂ ಗೊತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಿದ್ದರಾಮಯ್ಯ ಅವರಿಗೆ ಭ್ರದ್ರತೆಯನ್ನು ಹೆಚ್ಚಿಸುವಂತೆ ಈಗಾಗಲೇ ಆದೇಶ ಕೊಟ್ಟಿದ್ದೇನೆ ಎಂದು ತಿಳಿಸಿದರು.