ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ಮುಂಗಾರು ಮಳೆ ಕೈಕೊಟ್ಟ ನಂತ್ರ, ನೀರಿನ ಆಹಾಕಾರದ ನಡುವೆ ಬಿಸಿಲಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಈ ನಡುವೆ ಏಪ್ರಿಲ್.3, 4ರಂದು ತಾಪಮಾನ ಮತ್ತಷ್ಟು ಹೆಚ್ಚಾಗಲಿದೆ. ಎಚ್ಚರದಿಂದ ಇರುವಂತೆ ಹಾವಮಾನ ಇಲಾಖಎ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಹವಾಮಾನ ಇಲಾಖೆಯು, ಶಾಖದ ಅಲೆಯ ಎಚ್ಚರಿಕೆ: ರಾಜ್ಯದ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 03.04.2024 ರಿಂದ 05.04.2024 ರವರೆಗೆ ಶಾಖದ ಅಲೆಯ ಹೆಚ್ಚಾಗಿ ಇರುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಶಾಖದ ಅಲೆಯ ಎಚ್ಚರಿಕೆ: ರಾಜ್ಯದ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 03.04.2024 ರಿಂದ 05.04.2024 ರವರೆಗೆ ಶಾಖದ ಅಲೆಯ ಹೆಚ್ಚಾಗಿ ಇರುವ ಸಾಧ್ಯತೆಯಿದೆ.
ಮೂಲ: IMD#ಬಿಸಿವಾತಾವರಣ #ಶಾಖತರಂಗಸುರಕ್ಷತೆ #ರಣಬಿಸಿಲು@KarnatakaVarthe @Karnataka_DIPR @acsdevcom pic.twitter.com/qM5XuoziJM— Karnataka State Natural Disaster Monitoring Centre (@KarnatakaSNDMC) March 31, 2024
ರಾಜ್ಯದಲ್ಲಿ ‘ಬಿಸಿಲಾಘಾತ’ಕ್ಕೆ ಇಬ್ಬರು ಬಲಿ | Heat Stroke
ರಾಯಚೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಬಿಸಿಲಿನ ಝಳಕ್ಕೆ ಮನೆಯಿಂದ ಹೊಸ ಬಾರದಂತ ಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆಯ ಬಿಸಿಲಾಘಾತಕ್ಕೆ ರಾಜ್ಯದಲ್ಲಿ ಇಬ್ಬರು ಬಲಿಯಾಗಿದ್ದಾರೆ.
ಕಲಬುರ್ಗಿ ಜಿಲ್ಲೆಯ ಆಲಂದ ತಾಲೂಕಿನ ದಣ್ಣೂರ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೆಲಸದಲ್ಲಿ ಶರಣಪ್ಪ ಸಮಗಾರ(42) ತೊಡಗಿದ್ದರು. ನಾಲ್ಕು ದಿನಗಳ ಹಿಂದೆ ದಿಢೀರ್ ಕುಸಿದು ಬಿದ್ದಿದ್ದಂತ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಸಾವಿಗೆ ಬಿಸಿಲಾಘಾತ ಕಾರಣ ಎನ್ನಲಾಗುತ್ತಿದೆ.
ಇನ್ನೂ ಬಿರು ಬಿಸಿಲಿನ ನಡುವೆಯೂ ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದಂತ ಶ್ರೀಶೈಲ ದಡೂತಿ ಎಂಬ ಯುವಕ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕ್ಕಟೊಟ್ನೆಕಲ್ ಗ್ರಾಮದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.
ಸಾರ್ವಜನಿಕರೇ ಬೇಸಿಗೆಯ ಈ ಹೊತ್ತಲ್ಲಿ ತಪ್ಪದೇ ಈ ಸಲಹೆ ಪಾಲಿಸಿ
ಪ್ರಸ್ತುತ ಬೇಸಿಗೆಯಲ್ಲಿ ಮಧ್ಯಾಹ್ನ 01 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಪ್ರಖರವಾದ ಬಿಸಿಲು ಕಂಡುಬರುತ್ತಿರುವ ಹಿನ್ನಲೆಯಲ್ಲಿ ತಾಯಂದಿರು, ವಯೋವೃದ್ದರು ಮತ್ತು ಚಿಕ್ಕ ಮಕ್ಕಳು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರದಂತೆ, ಮನೆಯಲ್ಲಿಯೇ ಇರಬೇಕು ಎಂದು ಆರೋಗ್ಯ ಇಲಾಖೆ ಹೊರಡಿಸಿರುವಂತ ಮಾರ್ಗಸೂಚಿಯಲ್ಲಿ ತಿಳಿಸಿದೆ.
ತುರ್ತು ಸಂದರ್ಭಗಳಲ್ಲಿ ಅಥವಾ ಮನೆಯಿಂದ ಹೊರಗಡೆ ಬರಬೇಕಾದ ಅನಿರ್ವಾಯತೆ ಇದ್ದಾಗ ನೀರಿನ ಬಾಟೆಲ್ ಹಾಗೂ ಛತ್ರಿ ಮತ್ತು ಮಕ್ಕಳಿಗೆ ಆದಷ್ಟು ತಲೆಯ ಮೇಲೆ ನೀರಿನಿಂದ ಒದ್ದೆ ಮಾಡಿದ ಬಟ್ಟೆಯನ್ನು ಹಾಕುವುದಕ್ಕೆ ಆದ್ಯತೆ ನೀಡಬೇಕು. ಆದಷ್ಟು ನೆರಳಿನಲ್ಲಿ ಇರುವಂತೆ ಗಮನ ಹರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದೆ.
ಇವುಗಳನ್ನು ತಪ್ಪದೇ ಅನುಸರಿಸಿ
ಹೆಚ್ಚು ನೀರು ಕುಡಿಯುವುದು
ಬಾಯಾರಿಕೆ ಇಲ್ಲದಿದರೂ ಸಹ ಹೆಚ್ಚು ನೀರನ್ನು ಆಗಾಗ ಕುಡಿಯಬೇಕು. ಬಾಯಾರಿಕೆಯು ನಿರ್ಜಲೀಕರಣದ ಲಕ್ಷಣವಾಗಿದೆ. ಪ್ರಯಾಣ ಮಾಡುವ ಸಮಯದಲ್ಲಿ ಸಹ ಕುಡಿಯುವ ನೀರನ್ನು ಜೊತೆಗೆ ತೆಗೆದುಕೊಂಡು ಹೋಗುವುದು ಅಗತ್ಯವಾಗಿದೆ. ಓಆರ್‍ಎಸ್ ಜೀವಜಲವನ್ನು ಹಾಗೂ ಮನೆಯಲ್ಲಿಯೇ ಸಿದ್ದಪಡಿಸಿದ ನಿಂಬೆ ಹಣ್ಣಿನÀ ಶರಬತ್ತು, ಮಜ್ಜಿಗೆ, ಲಸ್ಸಿ, ಹಣ್ಣಿನ ಜ್ಯೂಸ್‍ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮವಾಗಿದೆ.
ಪ್ರಸ್ತುತ ಋತುಮಾನದ ಹಣ್ಣುಗಳಾದ ಕಲ್ಲಂಗಡಿ, ಕರ್ಬೂಜ, ಕಿತ್ತಳೆ, ದ್ರಾಕ್ಷಿ ಅನಾನಸ್ ಹಾಗೂ ಸೌತೆಕಾಯಿ, ಎಳೆನೀರು ಕಾಯಿ ಹೆಚ್ಚು ಸೇವಿಸಬೇಕು. ತಿಳಿ ಬಿಳಿ ಬಣ್ಣದ ಸಡಿಲವಾದ ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ. ನಡೆಯುವಾಗ ಪಾದರಕ್ಷೆ, ಚಪ್ಪಲಿ ತಪ್ಪದೆ ಧರಿಸಬೇಕು.
ಇವುಗಳನ್ನು ಮಾಡಬಾರದು
ಬಿಸಿಲಿನಲ್ಲಿ ಆದಷ್ಟು ಹೊರಹೊಗುವುದನ್ನು ತಪ್ಪಿಸಿ. ಮಧ್ಯಾಹ್ನದ ಸಂದರ್ಭದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗಬಾರದು. ಮಧ್ಯಪಾನ, ಟೀ, ಕಾಫಿ, ಹೆಚ್ಚು ಸಕ್ಕರೆ ಅಂಶವುಳ್ಳ ಪದಾರ್ಥಗಳನ್ನು ಸೇವಿಸಬೇಡಿ ಇವುಗಳ ಅತಿಯಾದ ಸೇವನೆಯಿಂದ ದೇಹ ನಿರ್ಜಲೀಕರಣಗೊಳ್ಳಬಹುದು ಅಥವಾ ಹೊಟ್ಟೆ ನೋವು ಕಂಡುಬರಬಹುದು.
ಗರ್ಭಿಣಿಯರು ಆರೋಗ್ಯ ಸಮಸ್ಯೆಯಿಂದ ಬಳಲುವವರು ಮತ್ತು ನಿಗಧಿತ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವವರು ವೈದ್ಯರ ಸಲಹೆ ಮೇರೆಗೆ ಮನೆಯ ಹೊರಗಡೆ ಕೆಲಸ ಮಾಡಲು ಆದ್ಯತೆ ನೀಡಿ. ಬೇಸಿಗೆಯಲ್ಲಿ ಕಲುಷಿತ ನೀರಿನ ಸೇವನೆಯಿಂದ ಸಂಭಾವ್ಯ ವಾಂತಿ-ಬೇಧಿ ಪ್ರಕರಣಗಳು ಉಂಟಾಗುವ ಹಿನ್ನಲೆಯಲ್ಲಿ ಶುದ್ಧೀಕರಿಸದೇ ಇರುವ ಅಥವಾ ಕೆರೆ, ಕುಂಟೆಗಳ ನೀರನ್ನು ನೇರವಾಗಿ ಕುಡಿಯಬೇಡಿ. ರಸ್ತೆ ಬದಿ ತೆರೆದಿಟ್ಟ ಆಹಾರ ಪದಾರ್ಥ ಮತ್ತು ಕತ್ತಿರಿಸಿಟ್ಟ ಹಣ್ಣುಗಳನ್ನು ತಿನ್ನಬಾರದು.
ಸಾಮಾನ್ಯ ಅಪಾಯದ ಚಿಹ್ನೆಗಳು
ವಯಸ್ಕರಲ್ಲಿ ಅರೆಪ್ರಜ್ಞಾವಸ್ಥೆ, ಪ್ರಜ್ಞೆ ತಪ್ಪುವುದು, ಸಿಡಿಮಿಡಿಗೊಳ್ಳುವುದು, ಗಾಬರಿಗೊಳ್ಳುವುದು, ಅತಿಯಾದ ತಲೆನೋವು, ಚರ್ಮವು ಬಿಸಿ ಹಾಗೂ ಕೆಂಪಾದ ಒಣಚರ್ಮ, ಆತಂಕ, ತಲೆಸುತ್ತುವಿಕೆ, ಮಾಂಸಖಂಡಗಳಲ್ಲಿ ಸುಸ್ತು ಅಥವಾ ಸೆಳೆತ, ವಾಕರಿಕೆ ಮತ್ತು ವಾಂತಿ, ಮಕ್ಕಳಲ್ಲಿ ಆಹಾರ ಸೇವಿಸಲು ನಿರಾಕರಿಸುವುದು, ಕನಿಷ್ಠ ಮೂತ್ರ ವಿಸರ್ಜನೆ, ಬಾಯಿ ಒಣಗುವಿಕೆ, ಆಲಸ್ಯ, ಮೂರ್ಛೆ ಹೋಗುವುದು, ದೇಹದ ಯಾವುದೇ ಭಾಗದಲ್ಲಿ ರಕ್ತಸ್ರಾವ ಕಂಡುಬರುತ್ತವೆ.
ರಾಷ್ಟ್ರೀಯ ಹವಮಾನ ಬದಲಾವಣೆ ಹಾಗೂ ಮಾನವ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಡಾ.ಅಬ್ದುಲ್ಲಾ ರವರ ನೇತೃತ್ವದಲ್ಲಿ ತಂಡ ರಚಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಅಲ್ಲದೇ ಪ್ರತಿ ದಿನ ದಿನ ಪತ್ರಿಕೆಗಳು, ರೇಡಿಯೋ, ದೂರದರ್ಶನ, ಮತ್ತು ಜಿಲ್ಲಾ ವಿಪತ್ತು ಪ್ರಾಧಿಕಾರದ ಮೂಲಕ ನೀಡುವ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು.
ಎಲ್ಲಾ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೇಸಿಗೆಯಲ್ಲಿ ಬರಬಹುದಾದ ರೋಗಗಳ ಆರೈಕೆಗಾಗಿ, ಓಆರ್‍ಎಸ್, ಐವಿ ಪ್ಲೂಯಿಡ್ಸ್ ಮತ್ತು ಜೀವರಕ್ಷಕ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಹಾಗೂ ಆರೋಗ್ಯಾಧಿಕಾರಿಗಳು ನೀರಿನ ಗುಣಮಟ್ಟದ ಪರೀಕ್ಷೆಯನ್ನು ನಿಯಮಿತವಾಗಿ ಮಾಡುವಂತೆ ಸೂಚನೆಯನ್ನು ಆರೋಗ್ಯ ಇಲಾಖೆ ನೀಡಿದೆ.
ತಿಂಗಳ ಮೊದಲ ದಿನವೇ `ಗ್ರಾಹಕರಿಗೆ ಗುಡ್ ನ್ಯೂಸ್’ : ‘LPG’ ವಾಣಿಜ್ಯ ಸಿಲಿಂಡರ್ ಬೆಲೆ 32 ರೂ. ಇಳಿಕೆ
ಬೆಂಗಳೂರಿನ ‘ವಾಹನ ಸವಾರ’ರೇ ಗಮನಿಸಿ: ಇಂದಿನಿಂದ 1 ವರ್ಷ ಈ ಮಾರ್ಗದಲ್ಲಿ ‘ಸಂಚಾರ ಬಂದ್’