ಬೆಂಗಳೂರು: ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಎದುರಿಸುತ್ತಿರುವ ಸ್ಥಳೀಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಇನ್ಮುಂದೆ ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರಲು ಸಾಮಾಜಿಕ ಜಾಲತಾಣ ‘ಎಕ್ಸ್’ (ಹಿಂದಿನ ಟ್ವಿಟರ್) ಅನ್ನು ಸುಲಭವಾಗಿ ಬಳಸಿಕೊಳ್ಳಬಹುದಾಗಿದೆ.
ಜನರು ತಾವು ಸ್ಥಳೀಯವಾಗಿ ಎದುರಿಸುತ್ತಿರುವ ಯಾವುದೇ ಮೂಲಸೌಕರ್ಯ ಅಥವಾ ಇತರೆ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ (OSD) ಅಧಿಕೃತ ‘ಎಕ್ಸ್’ ಖಾತೆಗೆ ಟ್ಯಾಗ್ ಮಾಡುವ ಮೂಲಕ ನೇರವಾಗಿ ಸರ್ಕಾರದ ಗಮನಕ್ಕೆ ತರಬಹುದಾಗಿದೆ.
ಇದಕ್ಕಾಗಿ ಸಾರ್ವಜನಿಕರು ತಮ್ಮ ದೂರುಗಳನ್ನು ಅಥವಾ ಸಮಸ್ಯೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವಾಗ @osd_cmkarnataka ಖಾತೆಯನ್ನು ಕಡ್ಡಾಯವಾಗಿ ಟ್ಯಾಗ್ ಮಾಡಬೇಕು ಎಂದು ತಿಳಿಸಲಾಗಿದೆ.
ಈ ಹೊಸ ವ್ಯವಸ್ಥೆಯಿಂದಾಗಿ ಸರ್ಕಾರದ ಮಟ್ಟದಲ್ಲಿ ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಶೀಘ್ರವಾಗಿ ಪರಿಹಾರ ಒದಗಿಸುವ ಭರವಸೆಯನ್ನು ನೀಡಲಾಗಿದೆ.
ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಕಲಬುರಗಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಸದಬ ಗ್ರಾಮದ ಕಾಲುವೆ ರಸ್ತೆಯ ಬಳಿ ಗ್ರಾಮಸ್ಥರು ಕಟ್ಟಿಗೆ ಕಂಬದ ಮುಖಾಂತರ ವಿದ್ಯುತ್ ಸರಬರಾಜು ಪಡೆದುಕೊಂಡಿರುವ ಬಗ್ಗೆ ದೇವು ಹೊಸಮನಿ ಎಂಬುವವರು ಇಮೇಲ್ ಮೂಲಕ ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ ಗಮನಕ್ಕೆ ತಂದಿರುತ್ತಾರೆ.
ಸದಬ… pic.twitter.com/WmPnQVXKJ8
— DIPR Karnataka (@KarnatakaVarthe) March 27, 2026
ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಿಂದ ನಾರಾಯಣಪೇಟೆಗೆ ತೆರಳುವ ಮುಖ್ಯ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವಂತೆ… pic.twitter.com/uSFU9WwKle
— DIPR Karnataka (@KarnatakaVarthe) March 27, 2026
ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಬಲ್ಲೂರು ಗ್ರಾಮದಲ್ಲಿ ಚರಂಡಿ ಸ್ವಚ್ಛಗೊಳಿಸಿದ ಬಳಿಕ ತ್ಯಾಜ್ಯವನ್ನು ರಸ್ತೆ ಮೇಲೆಯೇ ಬಿಟ್ಟಿದ್ದು, ಇದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ… pic.twitter.com/ZK0GwR7RS7
— DIPR Karnataka (@KarnatakaVarthe) March 27, 2026








