Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಗಸ್ಟ್.30ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut

28/08/2025 5:57 PM

ರಾಜ್ಯದಲ್ಲಿ ‘ಜಲಮೂಲ’ಗಳ ಸಮಗ್ರ ನಿರ್ವಹಣೆಗೆ ಸರ್ಕಾರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ

28/08/2025 5:52 PM

ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಕುರಿತು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

28/08/2025 5:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನರೇ ಗಮನಿಸಿ : `ಯಶಸ್ವಿನಿ ಯೋಜನೆ’ ನೋಂದಣಿಗೆ ಮಾರ್ಚ್ 31 ಕೊನೆಯ ದಿನ | Yashaswini Yojana
KARNATAKA

ರಾಜ್ಯದ ಜನರೇ ಗಮನಿಸಿ : `ಯಶಸ್ವಿನಿ ಯೋಜನೆ’ ನೋಂದಣಿಗೆ ಮಾರ್ಚ್ 31 ಕೊನೆಯ ದಿನ | Yashaswini Yojana

By kannadanewsnow5712/03/2025 5:20 AM

ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸುವ ಸಲುವಾಗಿ ಅವಧಿಯನ್ನು ದಿನಾಂಕ:01-02-2025 ರಿಂದ ದಿನಾಂಕ:31-03-2025 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ ನಿಗದಿಯಾಗಿದ್ದು, ಇಲಾಖೆಯ ಕ್ಷೇತ್ರ ಸಿಬ್ಬಂದಿಗಳು / ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಇದರಿಂದಾಗಿ ಯಶಸ್ವಿನಿ ನೋಂದಣಿಯಲ್ಲಿ ಹೆಚ್ಚಿನ ಪ್ರಗತಿ ಆಗಿರುವುದಿಲ್ಲವೆಂದು ಹಾಗೂ ನಿಗದಿಪಡಿಸಿರುವ ಗುರಿಯ ಪೈಕಿ ಇಲ್ಲಿಯವರೆಗೆ ಸುಮಾರು 10 ಲಕ್ಷ ಸದಸ್ಯರ ನೋಂದಣಿ ಮಾತ್ರವಾಗಿದ್ದು, ಇನ್ನೂ ಅನೇಕ ಸದಸ್ಯರು ನೋಂದಾಯಿಸಿಕೊಳ್ಳಲು ಆಸಕ್ತರಾಗಿರುವುದರಿಂದ ಯೋಜನೆಯಡಿ ಹೆಚ್ಚಿನ ರೀತಿಯಲ್ಲಿ ಪ್ರಗತಿ ಸಾಧಿಸಲು 2024-25 ನೇ ಸಾಲಿನ ಯಶಸ್ವಿನಿ ಯೋಜನೆಯಡಿ ಸದಸ್ಯರ ನೋಂದಣಿ/ನವೀಕರಣ ಅವಧಿಯನ್ನು ದಿನಾಂಕ: 01-02-2025 ರಿಂದ ದಿನಾಂಕ: 31-03-2025 ರವರೆಗೆ ವಿಸ್ತರಿಸಲು ನಿಬಂಧಕರು ಕೋರಿರುತ್ತಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಸಾಲಿನಲ್ಲಿ ಯಶಸ್ವಿನಿ ಯೋಜನೆಯನ್ನು ಮುಂದುವರೆಸಲು ಹಾಗೂ ಈ ಯೋಜನೆಯಲ್ಲಿ ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸುವ ಸಲುವಾಗಿ ಅವಧಿಯನ್ನು ದಿನಾಂಕ:01-02-2025 ರಿಂದ ದಿನಾಂಕ:31-03-2025 ರವರೆಗೆ ವಿಸ್ತರಿಸಿ ಆದೇಶಿಸಿದೆ.

ಬೇಕಾದ ಅಗತ್ಯ ದಾಖಲೆಗಳು

ನವೀಕರಣ ಮಾಡಲು
1.ಯಶಸ್ವಿನಿ ಐಡಿ ಕಾರ್ಡು,

2.ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)

3.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು.(ಕುಟುಂಬದ ಒಬ್ಬರದ್ದು)

ಹೋಸದಾಗಿ ನೋದಾಯಿಸಲು:-

1.ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು.

2.ಕುಟುಂಬದ ರೇಷನ್ ಕಾರ್ಡ್ ಪ್ರತಿ ಜೆರಾಕ್ಸ್,

3.ಆಧಾರ್ ಕಾರ್ಡ್ ಜೆರಾಕ್ಸ್ (ನೋದವಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)

4.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು. (ಕುಟುಂಬದ ಒಬ್ಬರದ್ದು)

5. ಪ್ರತಿಯೊಬ್ಬರದ್ದು 2 ಕಾಪೀ ಪೋಟೊ.

ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು. ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊಂಡಿದ್ದು, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.

ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬAಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬAಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.

ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆÀ ದಾಖಲಾಗುವ ಸಂದರ್ಭದಲ್ಲಿ ನೆಟ್‌ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್‌ಡಿ ನಂಬರ್ ತರುವುದು ಕಡ್ಡಾಯವಾಗಿದೆ.

People of the state take note: March 31 is the last day to register for `Yashaswini Yojana'
Share. Facebook Twitter LinkedIn WhatsApp Email

Related Posts

ಆಗಸ್ಟ್.30ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut

28/08/2025 5:57 PM2 Mins Read

ರಾಜ್ಯದಲ್ಲಿ ‘ಜಲಮೂಲ’ಗಳ ಸಮಗ್ರ ನಿರ್ವಹಣೆಗೆ ಸರ್ಕಾರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ

28/08/2025 5:52 PM2 Mins Read

ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಕುರಿತು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

28/08/2025 5:31 PM1 Min Read
Recent News

ಆಗಸ್ಟ್.30ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut

28/08/2025 5:57 PM

ರಾಜ್ಯದಲ್ಲಿ ‘ಜಲಮೂಲ’ಗಳ ಸಮಗ್ರ ನಿರ್ವಹಣೆಗೆ ಸರ್ಕಾರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ

28/08/2025 5:52 PM

ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಕುರಿತು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

28/08/2025 5:31 PM

ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: ಈ 9 ಆಸ್ಪತ್ರೆಗಳಿಗೆ ವೈದ್ಯರ ನೇಮಕ

28/08/2025 5:24 PM
State News
KARNATAKA

ಆಗಸ್ಟ್.30ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut

By kannadanewsnow0928/08/2025 5:57 PM KARNATAKA 2 Mins Read

ಬೆಂಗಳೂರು: ದಿನಾಂಕ 30.08 2025 (ಶನಿವಾರ) 09:00 ಗಂಟೆಯಿಂದ 18:00 ಗಂಟೆಯವರೆಗೆ 66kV DG-3 & 66kV DG-4 ಮಾರ್ಗಗಳಲ್ಲಿ…

ರಾಜ್ಯದಲ್ಲಿ ‘ಜಲಮೂಲ’ಗಳ ಸಮಗ್ರ ನಿರ್ವಹಣೆಗೆ ಸರ್ಕಾರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ

28/08/2025 5:52 PM

ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಕುರಿತು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

28/08/2025 5:31 PM

ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: ಈ 9 ಆಸ್ಪತ್ರೆಗಳಿಗೆ ವೈದ್ಯರ ನೇಮಕ

28/08/2025 5:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.