ಬೆಂಗಳೂರು : ರಾಜ್ಯದ ಹದಿಮೂರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿ ಜನರು ಸಂಕಷ್ಟದಲ್ಲಿರುವಾಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅದ್ದೂರಿಯಾಗಿ ಜನ್ಮದಿನ ಆಚರಿಸಿಕೊಳ್ಳುತ್ತಿರುವುದರ ಔಚಿತ್ಯವನ್ನು ರಾಜ್ಯದ ಜನತೆ ತೀರ್ಮಾನಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.
ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವ ಪಕ್ಷ ನಮ್ಮದು. ಇದಕ್ಕೆ ತದ್ವಿರುದ್ಧವಾಗಿ ದೇಶಕ್ಕಿಂತ ಪಕ್ಷ, ಈ ಕುಟುಂಬ ಮುಖ್ಯ ಎಂಬ ಚಿಂತನೆ ಹೊಂದಿರುವ ಪಕ್ಷ ಅವರದ್ದು. ನಾವು “ಸ್ವಾತಂತ್ರ್ಯದ ಅಮೃತ ಮಹೋತ್ಸವ” ಆಚರಿಸಿದರೆ, ಅವರು ಅವರದ್ದೇ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಾರ. ನಮ್ಮ ಪಕ್ಷದಲ್ಲಿ ವ್ಯಕ್ತಿಪೂಜೆ, ಪಲ್ಲಕ್ಕಿ ಪೂಜೆಗೆ ಅವಕಾಶ ಇಲ್ಲ. ಕಾಂಗ್ರೆಸ್ನಲ್ಲಿ ಅದೇ ಮುಖ್ಯ ಲಸಿಕಾಕರಣ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಶನಿವಾರ ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದರು.
Good News: ಜುಲೈ.28ರಂದು ಬೆಂಗಳೂರಿನಲ್ಲಿ ಮೊದಲ ʼನಮ್ಮ ಕ್ಲಿನಿಕ್ʼ ಕಾರ್ಯಾರಂಭ – ಸಚಿವ ಡಾ.ಕೆ ಸುಧಾಕರ್
ಅತಿಯಾದ ಮಳೆಯಿಂದ ಅನೇಕ ಜಿಲ್ಲೆಗಳ ಜನರು ಸಂತ್ರಸ್ಥರಾಗಿ ಪರದಾಡುತ್ತಿರುವಾಗ ಜನ್ಮದಿನಾಚರಣೆ ಆಚರಿಸಿಕೊಳ್ಳುವುದು ಸರಿಯೇ? ತಪ್ಪೇ ಎಂಬುದನನ್ನು ಅವರ ವಿವೇಚನೆಗೆ ಬಿಡುತ್ತೇನೆ. ಆ ಬಗ್ಗೆ ರಾಜ್ಯದ ಜನ ನಿರ್ಣಯಿಸುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಸಾಧನಾ ಸಮಾವೇಶ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರವಹಿಸಿಕೊಂಡು ಇದೇ ತಿಂಗಳ 28ಕ್ಕೆ ಒಂದು ವರ್ಷ ಪೂರೈಸಲಿದ್ದಾರೆ.ಈ ಒದು ವರ್ಷದ ಅವಧಿಯಲ್ಲಿ ಜನಪರ ಸ್ವಚ್ಛ ಆಡಳಿತ ನೀಡಿರುವುದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಸಮಾವೇಶ ನಡೆಸಲು ನಿರ್ಧರಿಸಿ ದೊಡ್ಡಬಳ್ಳಾಪುರವನ್ನು ಆಯ್ಕೆ ಮಾಡಲಾಗಿದೆ ಹೊರತು ಅದಕ್ಕೆ ಬೇರೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವನಾಗಿರುವುದರಿಂದ ನನಗೆ ಮತ್ತು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿ ಸಚಿವರುಗಳಿಗೆ ಸಮಾವೇಶದ ಜವಾಬ್ದಾರಿ ನೀಡಲಾಗಿದೆ. ನಾವೆಲ್ಲರೂ ಒಟ್ಟಾಗಿ ಆ ಕಾರ್ಯಕ್ರಮ ಯಶಸ್ವಿಗೊಳಿಸಲು ಕೆಲಸ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
75 ದಿನಗಳಲ್ಲಿ ನಾಲ್ಕೂವರೆ ಕೋಟಿ ಜನರಿಗೆ ಬೂಸ್ಟರ್ ಡೋಸ್ – ಸಚಿವ ಸುಧಾಕರ್
ಕಟ್ಟೆಚ್ಚರವಹಿಸಲಾಗಿದೆ
ಮಂಕಿಫಾಕ್ಸ್ ಕುರಿತಂತೆ ರಾಜ್ಯಾದ್ಯಂತ ಕಟ್ಟೆಚ್ಚರವಹಿಸಲಾಗಿದೆ. ಆರು ತಿಂಗಳ ಹಿಂದೆಯೇ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚಿಸಿ ಮುನ್ನೇಚ್ಚರಿಕೆ ಮಾರ್ಗಸೂಚಿ ಹೊರಡಿಸಲಾಗಿತ್ತು. ವಿಮಾನನಿಲ್ದಾಣ, ರೈಲು ನಿಲ್ದಾಣಗಳಲ್ಲಿ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೇರಳದಲ್ಲಿ ಮೊನ್ನೆ ಒಂದು ಪ್ರಕರಣ ವರದಿಯಾಗಿದೆ. ಆ ನಂತರ ಗಡಿ ಭಾಗದಲ್ಲಿ ಮತ್ತು ಇತರೆ ಭಾಗಗಳಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆಈಗಾಗಲೇ ಇಲಾಖೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಹೀಗಾಗಿ ಮಂಕಿಫಾಕ್ಸ್ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮೊಟ್ಟೆ ಅಪೌಷ್ಟಿಕ ಎಂಬಶಿಕ್ಷಣಕ್ಕೆ ವರದಿಯನ್ನು ಶಿಕ್ಷಣ ಇಲಾಖೆಗೆ ನೀಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ವೈಯಕ್ತಿಕವಾಗಿ ತಿಳಿದುಕೊಂಡಿರುವಂತೆ ಹಾಲು, ಮೊಟ್ಟೆ ಎಲ್ಲವೂ ಅತ್ಯಂತ ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಎಂದು ತಿಳಿದುಕೊಂಡಿದ್ದೇನೆ ಎಂದು ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದರು.