ಬಳ್ಳಾರಿ : ಸಿದ್ದರಾಮಯ್ಯ ಹೇಳಿಕೆಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ಅವರು ನಾಯಿ ಮರಿ ಪದ ಬಳಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ಹೇಳಿಕೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವ ತೋರಿಸುತ್ತದೆ. ನಾಯಿ ನಿಯತ್ತಿನ ಪ್ರಾಣಿ. ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ನಿಯತ್ತನ್ನ ಜನರ ಪರವಾಗಿ ಉಳಿಸಿಕೊಂಡು ಹೋಗುವೆ ಎಂದರು.
ದೌರ್ಭಾಗ್ಯ ನೀಡಿಲ್ಲ
ಅವರ ಹಾಗೆ ಸಮಾಜ ಒಡೆಯುವ ಕೆಲಸ ಮಾಡುವುದಿಲ್ಲ. ಸೌಭಾಗ್ಯ ಕೊಡುತ್ತೇವೆ ಎಂದು ಹೇಳಿ ದೌರ್ಭಾಗ್ಯ ನೀಡಿಲ್ಲ . ಈ ರೀತಿಯ ಕೆಲಸ ನಾವು ಮಾಡಿಲ್ಲ ಎಂದರು.
ರಾಜಕೀಯವಾಗಿ ಹೇಳಿಕೆ ಸಲ್ಲದು
ಬಹಿರಂಗ ಚರ್ಚೆಗೆ ಸಿದ್ದರಾಮಯ್ಯ ಆಹ್ವಾನ ನೀಡಿರುವ ಹಿನ್ನಲೆಯಲ್ಲಿ ಮಾತನಾಡಿ ವಿಧಾನಸಭೆಗಿಂತ ದೊಡ್ಡ ವೇದಿಕೆ ಯಾವುದೂ ಇಲ್ಲ.
15 ದಿನಗಳ ಕಾಲ ಸದನ ನಡೆಯಿತು. ಅದಕ್ಕಿಂತಲೂ ಹಿಂದೆಯೂ ನಡೆದಿದೆ. ವೇದಿಕೆ ಇದ್ದಾಗ ಚರ್ಚೆ ಮಾಡದೆ, ಹೊರಗೆ ರಾಜಕೀಯವಾಗಿ ಹೇಳಿಕೆ ನೀಡುತ್ತಾರೆ. ಜನವರಿ ಫೆಬ್ರವರಿ ಯಲ್ಲಿ ಪುನಃ ಅಧಿವೇಶನ ನಡೆಯಲಿದ್ದು, ಚರ್ಚೆ ಮಾಡೋಣ. ವಿಧಾನಮಂಡಲಕ್ಕಿಂತ ಪವಿತ್ರ ವೇದಿಕೆ ಎಲ್ಲಿದೆ ಎಂದರು.
ಮೋದಿ ಕಾಮಧೇನು
ಸಿದ್ದರಾಮಯ್ಯ ಹಿಂದೆ ಅತ್ಯಂತ ಸಭ್ಯ ಪ್ರಧಾನಿ ಮನಮೋಹನ ಸಿಂಗ್ ಎದುರಿಗೆ ಹೆದರಿಕೊಂಡು ಹೋಗಲೇ ಇಲ್ಲ. ರಾಜ್ಯಕ್ಕೆ ನಯಾಪೈಸೆ ತರಲು ಆಗಲಿಲ್ಲ. ಬಹಳ ರಾಜ್ಯಕ್ಕೆ ಅವರು ಕೊಡುಗೆ ಏನೂ ಇಲ್ಲ ಎಂದರು.
ಮೋದಿಯವರು ಪ್ರಧನಾನಿಯಾದ ನಂತರ ವಿಶೇಷ ವಾದ ಕೊಡುಗೆಗಳನ್ನು ನೀಡಿದ್ದಾರೆ. ಮೋದಿಯವರು ರಾಜ್ಯಕ್ಕೆ 6 ಸಾವಿರ ಕಿ.ಮೀ ಹೆದ್ದಾರಿ ಕೊಡಿಗೆ ನೀಡಿದ್ದಾರೆ. ಸ್ವತಂತ್ರ ಬಂದ ನಂತರ ಒಂದು ರಾಜ್ಯಕ್ಕೆ ಇಷ್ಟು ದೊಡ್ಡ ಬಂದಿರುವುದು ಒಂದು ದಾಖಲೆ. ಬೆಂಗಳೂರು ಮೈಸೂರು ಹೆದ್ದಾರಿ ಯೋಜನೆ, ಮಂಗಳೂರು ಕಾರವಾರ ಬಂದರು, ಕಳಸಾ ಬಂಡೂರಿ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಬರುವ ದಿನಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ, ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಅನುದಾನ ನೀಡಲಿದ್ದಾರೆ. ಎಲ್ಲಾ ಮಹಾನಗರಗಳಿಗೆ ಸ್ಮಾರ್ಟ್ ಸಿಟಿ ಯೋಜನೆ ನೀಡಿದ್ದಾರೆ. ಇವರ ಕಾಲದಲ್ಲಿ ಇರಲಿಲ್ಲ. ಇಂಥ ಮಹತ್ವವನ್ನು ಯೋಜನೆಗಳನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ. ಮೋದಿ ಕೊಡುವ ಕಾಮಧೇನು ಅವರಿಗೆ ಅದರ ಬಗ್ಗೆ ಜ್ಞಾನ ಇಲ್ಲ. ರಾಜಕೀಯ ಪ್ರೇರಿತ ಹೇಳಿಕೆಗಳನ್ನ ಕೊಡುವುದು ಸಿದ್ದರಾಮಯ್ಯ ರೂಡಿ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳಿದರು. ತಳಬುಡ ಇಲ್ಲದ ಹೇಳಿಕೆಗಳನ್ನು ನೀಡುತ್ತಾರೆ ಎಂದರು.
SHOCKING NEWS: ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯ ಹೊಟ್ಟೆಯೊಳಗೆ ʻಟವೆಲ್ʼ ಬಿಟ್ಟ ವೈದ್ಯರು… ಮುಂದೇನಾಯ್ತು ನೋಡಿ