ಗದಗ : ಸಂಸದ ಅನಂತಕುಮಾರ ಹೆಗಡೆ, ಮುಖ್ಯಮಂತ್ರಿಗೆ ಸಿದ್ರಾಮುಲ್ಲಾಖಾನ್ ಎಂಬ ಹೇಳಿಕೆ ವಿಚಾರಕ್ಕೆ ಆಕ್ರೋಶಗೊಂಡ ಯತೀಂದ್ರ ಸಿದ್ದರಾಮಯ್ಯ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರನ್ನು ಜನ ಎಂದಿಗೂ ಒಪ್ಪುವುದಿಲ್ಲ, ಯಾರು ಕೆಲಸ ಮಾಡಿದ್ದಾರೋ ಅವರಿಗೆ ಜನ ಮತ ಹಾಕುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಸದ ಅನಂತಕುಮಾರ ಹೆಗಡೆ, ಮುಖ್ಯಮಂತ್ರಿಗೆ ಸಿದ್ರಾಮುಲ್ಲಾಖಾನ್ ಎಂಬ ಹೇಳಿಕೆ ವಿಚಾರಕ್ಕೆ ಆಕ್ರೋಶಗೊಂಡ ಅವರು, ಯಾರು ಎಲ್ಲ ಸಮುದಾಯಕೋಸ್ಕರ ಕೆಲಸ ಮಾಡುತ್ತಾರೆಯೋ ಅವರನ್ನು ಒಂದು ಸಮುದಾಯದ ಪರ ಎಂದು ಬಿಂಬಿಸುತ್ತಾರೆ.
ಇದು ಬಿಜೆಪಿಗರ ಹಳೆಯ ಟ್ಯಾಕ್ಟಿಕ್ಸ್ ಎಂದರು.ಅನಂತಕುಮಾರ ಹೆಗಡೆ 5 ವರ್ಷ ಏನೂ ಕೆಲಸ ಮಾಡಿಲ್ಲ, ಅವರ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. 5 ವರ್ಷ ಜನರ ಮುಂದೆ ಬರಲಿಲ್ಲ, ಪಾರ್ಲಿಮೆಂಟ್‌ನಲ್ಲಿ ಒಂದೂ ಪ್ರಶ್ನೆ ಕೇಳಲಿಲ್ಲ, ಈಗ ಎಲೆಕ್ಷನ್ ಬಂದಿದೆ ಎಂದು ಹಿಂದೂ -ಮುಸ್ಲಿಂ ಮಧ್ಯೆ ಭಿನ್ನಾಭಿಪ್ರಾಯ ತರಲು ಯತ್ನಿಸುತ್ತಿದ್ದಾರೆ.
4 ಲಕ್ಷ ಕೋಟಿಯಷ್ಟು ತೆರಿಗೆ ಸಂಗ್ರಹಣವಾಗುತ್ತಿದೆ, ರುಪಾಯಿ ಕೊಟ್ಟರೆ 12 ಪೈಸೆ ವಾಪಸ್ ಬರ್ತಿದೆ, ಹಿಂದುಳಿದ ರಾಜ್ಯಗಳಿಗೆ ಕೊಡಲಿ, ಬೇಡ ಎನ್ನುವುದಿಲ್ಲ, ನಮಗ್ಯಾಕೆ ಅನ್ಯಾಯ ಮಾಡುತ್ತಿದ್ದೀರಿ. ಒಂದು ರುಪಾಯಿಗೆ 12 ಪೈಸೆ ಬದಲು 20ರಿಂದ 25 ಪೈಸೆ ಕೊಡಿ ಅಂತಿದೀವಿ. ಅನ್ಯಾಯ ಸರಿ ಪಡಿಸಲು ಕೇಳಿದ್ದೇವೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಇಷ್ಟೇ ಸ್ಥಾನ ಗೆಲ್ಲುತ್ತೇವೆ ಎಂದು ಹೇಳುವುದಿಲ್ಲ, ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದ್ದೇವೆ. ಜನರ ಪರವಾಗಿ ಕೆಲಸ ಮಾಡಿದವರ ಪರವಾಗಿ ಜನ ಹೆಚ್ಚಿನ ಸೀಟ್ ಬರುತ್ತದೆ ಎನ್ನುವ ವಿಶ್ವಾಸವಿದೆ ಎಂದರು. ಸ್ಥಳೀಯ ಮುಖಂಡರು, ಕುರುಬರ ಸಮಾಜದ ಹಿರಿಯರು ಹಾಜರಿದ್ದರು.