ಮಂಗಳೂರು : ರಾಜ್ಯ ಕಾಂಗ್ರೆಸ್ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬ ಮಾಸಿಕವಾಗಿ 5000 ಪಡೆಯುತ್ತಿದ್ದು ಇದರ ಉಪಕಾರವನ್ನು ಜನರು ಬರುವ ಲೋಕಸಭಾ ಚುನಾವಣೆಯಲ್ಲಿ ತೀರಿಸುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ನಿನ್ನೆ ನಡೆದ ರಾಜಮಟ್ಟದ ಬತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಅನೇಕರ ಮನೆ ದೀಪ ಬೆಳಗುತ್ತಿದೆ. ಈಗ ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಜತೆಯಾಗಿವೆ. ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದ ದೇವೇಗೌಡರು ಈಗ ಬಿಜೆಪಿಯತ್ತ ಹೋಗಿದ್ದಾರೆ.
ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಅಭಿವೃದ್ಧಿಗಾಗಿ 56 ಸಾವಿರ ಕೋಟಿ ರು.ಗಳನ್ನು ನೀಡುತ್ತಿದೆ. ಆದರೂ ಬಜೆಟ್ ವಿರೋಧಿಸಿ ಬಿಜೆಪಿ ಪ್ರತಿಭಟಿಸಿದೆ. ರಾಜ್ಯದಲ್ಲಿ 136 ಕಾಂಗ್ರೆಸ್ ಶಾಸಕರು, ಇಬ್ಬರು ಪಕ್ಷೇತರರು ನಮ್ಮ ಜತೆಗಿದ್ದಾರೆ. ವಿಪಕ್ಷದವರು ಏನೇ ತಂತ್ರ ಮಾಡಲಿ, ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷಪೂರ್ತಿ ಅಧಿಕಾರ ನಡೆಸಲಿದೆ. ನಂತರವೂ ಅಧಿಕಾರಕ್ಕೆ ಬರಲಿದೆ ಎಂದು ಶಿವಕುಮಾರ್ ಭರವಸೆ ವ್ಯಕ್ತಪಡಿಸಿದರು.
BIG NEWS: ‘ಗ್ರಾಮ ಪಂಚಾಯತಿ’ಗಳು ಕಡ್ಡಾಯವಾಗಿ ‘ಬಜೆಟ್’ ಮಂಡಿಸಿ: ‘ಅಧ್ಯಕ್ಷ’ರಿಗೆ ‘ಸಚಿವ ಪ್ರಿಯಾಂಕ್ ಖರ್ಗೆ’ ಪತ್ರ