ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಸಾಗರ ನಗರದ ಜೀವನಾಡಿ ಬಿ.ಎಚ್. ರಸ್ತೆ ಇಂದು ಅಭಿವೃದ್ಧಿಯ ಹೆಸರಿನಲ್ಲಿ ಅಧ್ವಾನದ ಹಾದಿಯಾಗಿದೆ. ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯು, ಅವೈಜ್ಞಾನಿಕ ಮತ್ತು ವಿಳಂಬ ಧೋರಣೆಯಿಂದಾಗಿ ಸಾರ್ವಜನಿಕರ ಪಾಲಿಗೆ ನರಕದರ್ಶನ ಮಾಡಿಸುತ್ತಿದೆ. ಐದು ವರ್ಷಗಳ ದೀರ್ಘ ಕಾಯುವಿಕೆಯ ನಂತರವೂ ರಸ್ತೆ ಸುಗಮವಾಗುವ ಬದಲು ಸರಣಿ ಅಪಘಾತಗಳ ತಾಣವಾಗಿ ಮಾರ್ಪಟ್ಟಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಸ್ಥಳ ಪರಿಶೀಲನೆಗೆ ಬಂದಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಕಂಡ ಸಾರ್ವಜನಿಕರು ಮತ್ತು ರೈತ ಮುಖಂಡರು ತಮ್ಮ ಐದು … Continue reading ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣದ ಹೆಸರಲ್ಲಿ ಪ್ರಾಣದ ಜೊತೆ ಚೆಲ್ಲಾಟ: ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ಜನಾಕ್ರೋಶ