ಕೊಪ್ಪಳ: ಜಿಲ್ಲೆಯಲ್ಲಿ ದೀಪಾವಳಿಯಲ್ಲಿ ದೀಪ ಕಾಯುವ ನೆಪದಲ್ಲಿ ಇಸ್ಪೀಟ್ ಆಡುತ್ತಾರೆ. ಹೀಗಾಗಿ ಯಾರು ಕೂಡ ಇಸ್ಪೀಟ್ ಆಡದಂತೆ ಪೊಲೀಸ್ ಇಲಾಖೆಯು ಡಂಗೂರ ಸಾರಿಸಿದ್ದಾರೆ.
ಸಿಬ್ಬಂದಿಯೂ ಮೈಕ್ ಮೂಲಕ ತಿಳಿ ಹೇಳಿ ಹಾಗೂ ವಾಹನಗಳಲ್ಲಿ ಘೋಷಣೆ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗಿತ್ತು. ಆದರೆ ಕೆಲವು ಕಡೆಗಳಲ್ಲಿ ಪೊಲೀಸರ ಎಚ್ಚರಿಕೆಯನ್ನು ನಿರ್ಲಕ್ಷ್ಯಿಸಿ ದೀಪಾವಳಿಯಂದು ಇಸ್ಪೀಟ್ ಆಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ದಂಡ ವಸೂಲಿ ಮಾಡಿದ್ದಾರೆ.
ಪೊಲೀಸರ ಸೂಚನೆಯ ನಂತರವೂ ದೀಪಾವಳಿ ನೆಪದಲ್ಲಿ ಕೊಪ್ಪಳದಲ್ಲಿ ಇಸ್ಪೀಟ್ ಹಾವಳಿ ಮಿತಿ ಮೀರಿದ ಹಿನ್ನೆಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಒಂದೇ ದಿನ ಹಲವೆಡೆ ದಾಳಿ ನಡೆಸಿ 30ಕ್ಕೂ ಹೆಚ್ಚು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದರಂತೆ ಒಟ್ಟು 228 ಜನರ ಮೇಲೆ ಪ್ರಕರಣ ದಾಖಲಾದಂತಾಗಿದೆ. ಜೂಜಿಗೆ ಇಟ್ಟ ಒಟ್ಟು 2.56 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.