ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆಯಲಿರುವ ಬಿಜೆಪಿ ಅದ್ಧೂರಿ ಜನಸ್ಪಂದನ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.
BIGG NEWS : ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ, ಕಮಿಷನ್ ಸಮಾವೇಶ : ಕಾಂಗ್ರೆಸ್ ವಾಗ್ದಾಳಿ
ಬಿಜೆಪಿ ಜನಸ್ಪಂದನಾ ಕಾರ್ಯಕ್ರಮದ ಬಗ್ಗೆರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ಮಾತನಾಡಿ, ಕೋಲಾರ, ಚಿಕ್ಕಬಳ್ಳಾಪುದಲ್ಲಿ ಕಡೆ ಪಕ್ಷಕ್ಕೆ ಶಕ್ತಿ ಇರಲಿಲ್ಲ. ಜನ ಸ್ಪಂದನೆ ಕಾರ್ಯಕ್ರಮದಿಂದ ಪಕ್ಷ ಸಂಘಟನೆಗೆ ಅನುಕೂಲ ಆಗುತ್ತದೆ. ಈ ಕಾರ್ಯಕ್ರಮಕ್ಕೆ ಈಗಾಗಲೇ ವಿರೋಧ ಪಕ್ಷದವರು ಟೀಕೆ ಮಾಡ್ತಿದ್ದಾರೆ. ವಿರೋಧ ಪಕ್ಷಗಳು ವಿರೋಧ ಮಾಡೋದಕ್ಕೆ ಇರೋದು. ಪಕ್ಷ ಸಂಘಟನೆಗೆ ಇಂತಹ ಸಮವೇಶ ಅಗತ್ಯವಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS : ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ, ಕಮಿಷನ್ ಸಮಾವೇಶ : ಕಾಂಗ್ರೆಸ್ ವಾಗ್ದಾಳಿ