Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶರಾವತಿ ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ: ಸಂಸದ ಬಿ.ವೈ.ರಾಘವೇಂದ್ರ
KARNATAKA

ಶರಾವತಿ ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರವನ್ನು ಇಂದು ರಾಷ್ಟ್ರಕ್ಕೆ ಅರ್ಪಣೆ ಮಾಡಲಾಯಿತು. ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ ನೀಡಲಾಯಿತು.

ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ ಪ್ರಜ್ವಲಿಸುತ್ತಿದ್ದ “ಶರಾವತಿ ನದಿ” ಯ ಹಿನ್ನೀರಿಗೆ ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ ರಾಜ್ಯದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತ ಐತಿಹಾಸಿಕ ಕೇಬಲ್ ಆಧಾರಿತ 2.25 ಕಿ.ಮೀ ಉದ್ದದ ಸುಮಾರು 423 ಕೋಟಿ ಅನುದಾನದಲ್ಲಿ ದೇಶದ ಎರಡನೇ ಅತಿ ದೊಡ್ಡ ಸಂಪರ್ಕ ಸೇತುವೆ “ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು – ಕೊಲ್ಲೂರು (ಸ್ಥಳೀಯರ ಹೊಳೆಬಾಗಿಲು ಸೇತುವೆ)” ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಿಸಲಾಗಿದೆ. ಇದನ್ನು ಇಂದು ಕೇಂದ್ರ ಭೂ ಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಅವರು ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಜೊತೆಗೂಡಿ ರಾಷ್ಟ್ರಕ್ಕೆ ಸಮರ್ಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಸ್ಥಳೀಯ ನಾಯಕರು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ನಿರಂತರ ಆರು ದಶಕಗಳ ಹಿನ್ನೀರಿನ ಪ್ರದೇಶದ ಬಂಧುಗಳ ಹೋರಾಟದ ಕೂಗನ್ನು ಆಲಿಸಿ ಕೇಂದ್ರ ಸರ್ಕಾರ ಸುಮಾರು 423 ಕೋಟಿ ಅನುದಾನ ಬಿಡುಗಡೆಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಇದಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಂಕಲ್ಪದ ಫಲ ಮತ್ತು ನಿಮ್ಮೆಲ್ಲರ ನಿಸ್ವಾರ್ಥ ಪ್ರೀತಿಯ ಆಶೀರ್ವಾದ ಬಲದಿಂದ ಈ ಒಂದು ಐತಿಹಾಸಿಕ ಘಟನೆಗೆ ನಮ್ಮ ಮಲೆನಾಡು ಸಾಕ್ಷಿಯಾಗಿದೆ ಎಂದು ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ.

ಇದರೊಂದಿಗೆ ಕೇಂದ್ರ ಸರ್ಕಾರ ಅಧಿಕಾರ ನೀಡಿದ ಜನರ ಕೂಗಿಗೆ ತಕ್ಷಣವೇ ಸ್ಪಂದಿಸುವ ಮನೋಭಾವ ಇರುವ ಸರ್ಕಾರ ಎಂದು ಮತ್ತೊಮ್ಮೆ ದೇಶಕ್ಕೆ ಸಂದೇಶ ರವಾನಿಸಿದೆ. ಜೊತೆಗೆ ಶಂಕು ಸ್ಥಾಪನೆ ಮಾಡಿದ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ತನ್ನ ಅಧಿಕಾರದ ಅವಧಿಯಲ್ಲಿ ಉದ್ಘಾಟನೆ ಮಾಡುವ ಸಂಪ್ರದಾಯ ಮುಂದುವರೆಸಿ ಇತಿಹಾಸ ನಿರ್ಮಿಸುತ್ತಿದೆ. ಈ ಒಂದು ಸೇತುವೆ ಕೇವಲ ಶರಾವತಿ ಹಿನ್ನೀರಿನ ಸಂತ್ರಸ್ತರ ಬವಣೆ ಮಾತ್ರ ನೀಗಿಸುವುದಲ್ಲದೆ ನಮ್ಮ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಇನ್ನಷ್ಟು ಬಾಂಧವ್ಯ ಬೆಸೆಯುವ ಕಾಲಘಟಕ್ಕೆ ಮುನ್ನುಡಿ ಬರೆಯುವುದು ನಿಶ್ಚಿತ. ಜೊತೆಗೆ ಎರಡು ಜಿಲ್ಲೆಗಳ ಆರ್ಥಿಕ ಚಟುವಟಿಕೆ, ಪ್ರವಾಸೋದ್ಯಮ ಹಾಗೂ ವೈವಿಧ್ಯಮಯ ಸಂಸ್ಕೃತಿಗಳ ಸಮ್ಮಿಲನ ಗಟ್ಟಿಯಾಗುವುದು ಹೊಸ ಶಖೆಯ ಆರಂಭಕ್ಕೆ ಸಾಕ್ಷಿಯಾಗಲಿದೆ ಎಂದಿದ್ದಾರೆ.

ಈ ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತ ಐತಿಹಾಸಿಕ ಸಂದರ್ಭದಲ್ಲಿ ಈ ಸೇತುವೆ ಹೋರಾಟಕ್ಕೆ ದಶಕಗಳಿಂದ ಹೋರಾಟ ನಡೆಸುತ್ತಿದ್ದ ಪ್ರಸನ್ನ ಕೆರೆಕೈ ಅವರು ಸೇರಿದಂತೆ ಇನ್ನೂ ನೂರಾರು ಹೋರಾಟಗಾರರನ್ನು ನೆನಪು ಮಾಡಿಕೊಂಡು ಹೃದಯಪೂರ್ವಕ ಧನ್ಯವಾದ ಅರ್ಪಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಇಂದಿನ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪರಿಷತ್ ಸದಸ್ಯ ಧನಂಜಯ ಸರ್ಜಿ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ 13ನೇ ಜಾಗತಿಕ ಟಿ20 ಪ್ರಶಸ್ತಿ

ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವರು ಬಿಜೆಪಿ ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು ಇಂದು ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

2 Mins Read

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

2 Mins Read

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

2 Mins Read
Recent News

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

ಭಾರತದಲ್ಲಿ ಇ-85 (E85) ಎಥನಾಲ್ ಇಂಧನ ಕ್ರಾಂತಿ: ಚಾಲನೆಗೆ ಸಿದ್ಧವಾಗಿವೆ ಈ ಕಾರು ಮತ್ತು ಬೈಕ್‌ ಗಳು!

State News
KARNATAKA

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

By ಸುರೇಶ್‌ KARNATAKA 2 Mins Read

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ (CUK) ಬಿಸಿಎಂ (BCM) ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಮದ್ಯದ ಪಾರ್ಟಿ…

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

ಸರ್ದಾರ್ ಪಟೇಲ್, ನೆಹರೂ RSS ಬ್ಯಾನ್ ಮಾಡಿದಾಗ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.