ಬೆಂಗಳೂರು : ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಇಂದು ನಗರದಲ್ಲಿ ಪೌರ ಕಾರ್ಮಿಕರ ಜೊತೆ ಉಪಹಾರ ಸೇವಿಸಿ ನಂತರ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ‘ ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ನೇಮಕ ಮಾಡಲಾಗುತ್ತದೆ. ನಂತರ ಇನ್ನುಳಿದ ಕಾರ್ಮಿಕ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿಯಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ, ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ, ಶೀಘ್ರ ಪೌರ ಕಾರ್ಮಿಕರ ಖಾಯಂ ಬಗ್ಗೆ ಕ್ರಮ ಕೈಗೊಳ್ಳಲಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಈ ಕುರಿತು ಟ್ವೀಟ್ ಮಾಡಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಪೌರಕಾರ್ಮಿಕರಿಗೆ ಸಂಬಂಧಿಸಿದಂತೆ ಐಡಿಪಿ ಸಾಲಪ್ಪ ವರದಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಕಳೆದ ಸಂಪುಟ ಸಭೆಯಲ್ಲಿ 11 ಸಾವಿರ ಪೌರಕಾರ್ಮಿಕರ ಸೇವೆ ಕಾಯಂಗೆ ತೀರ್ಮಾನಿಸಲಾಗಿತ್ತು. ಇನ್ನೂ 43 ಸಾವಿರ ಜನರು ಬಾಕಿ ಇದ್ದು, ಅವರ ಸೇವೆ ಕಾಯಂಗೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಎಲ್ಲ ಪೌರಕಾರ್ಮಿಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ಪೌರಕಾರ್ಮಿಕರ ಕಾಯಂ ನೇಮಕಾತಿಗೆ ಸೂಕ್ತ ಕ್ರಮ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
BREAKING NEWS : PFI ಕಚೇರಿ ಮೇಲೆ NIA ದಾಳಿ ಖಂಡಿಸಿ, ಕೇರಳದಲ್ಲಿ ಬಂದ್ಗೆ ಕರೆ : KSRTC ಬಸ್ಗಳ ಗಾಜು ಪುಡಿಪುಡಿ
BIGG NEWS: ಡಿ.ಕೆಂಪಣ್ಣ ವಿರುದ್ಧ ₹50 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ಮುನಿರತ್ನ