ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್ ಕಿಡಿ

ಕಾಂಚಿಪುರಂ : “ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ತಮಿಳುನಾಡಿನ ಕಾಂಚಿಪುರಂ ವರದಾರಾಜು ಪೆರುಮಾಳ್ ದೇಗುಲದಲ್ಲಿ ಗುರುವಾರ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರ ಜತೆ ಶಿವಕುಮಾರ್ ಅವರು ಮಾತನಾಡಿದರು. “400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ … Continue reading ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್ ಕಿಡಿ