ಬೆಂಗಳೂರು : ಮುಡಾದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ನೋಟಿಸ್ ನೀಡಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಅಕ್ಷೇಪ ವ್ಯಕ್ತಪಡಿಸಿದರು. ಈ ಹಿನ್ನೆಲೆ ನಿನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ನೀಡಿದ ನೋಟಿಸ್ ಹಿಂಪಡೆಯಬೇಕು ಎಂದು ನಿರ್ಣಯ ಕೈಗೊಳ್ಳಲಾಯಿತು.
ಇನ್ನು ಈ ವಿಷಯವಾಗಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯಪಾಲರು ನೀಡಿರುವ ಪ್ರಸಿಕ್ಯೂಷನ್ ನೋಟಿಸ್ ಹಿಂಪಡೆಯುವಂತೆ ಸಂಪುಟ ನಿರ್ಧರಿಸಿದೆ. ಟಿಜೆ ಅಬ್ರಹಾಂ ದೂರನ್ನು ತಿರಸ್ಕರಿಸಲು ಸಂಪುಟದಲ್ಲಿ ನಿರ್ಣಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅಲ್ಲದೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ಕಾನೂನು ಹೋರಾಟ ಮಾಡಲು ತೀರ್ಮಾನಿಸಲಾಗುತ್ತಿದೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ನ ಕದ ತಟ್ಟಲು ಸರ್ಕಾರ ನಿರ್ಧಾರ ಮಾಡಿದೆ. ಇಡೀ ಬೆಳವಣಿಗೆ ಕಾನೂನಾತ್ಮಕ ಎಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಪ್ತ ಕಾನೂನು ಸಲಹೆಗಾರರಿಂದ ಮಾಹಿತಿ ಲಭ್ಯವಾಗಿದೆ.