ಬೆಳಗಾವಿ : ರಾಜ್ಯ ಸರ್ಕಾರ ( Karnataka Govt) ‘ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಮಸೂದೆ’ ಮಂಡಿಸಿದೆ.
ಚಳಿಗಾಲದ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರ ಈ ಮಸೂದೆ ಮಂಡಿಸಿದೆ. ಕೃಷಿ ಭೂಮಿಯನ್ನು ಇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇ ಶದಿಂದ ರಾಜ್ಯ ಸರ್ಕಾರ ‘ಕರ್ನಾಟಕ ಭೂ ಕಂದಾಯ ಮಸೂದೆ’ ಮಂಡಿಸಿದೆ.ಗುರುವಾರ ಸದನದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು 2022ನೇ ಸಾಲಿನ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಪಡೆದುಕೊಂಡರು.
ಕೃಷಿ ಭೂಮಿಯನ್ನು ಇತರ ಉದ್ದೇಶಗಳಿಗೆ ಪರಿವರ್ತಿಸಲು ಇದು ಸುಲಭವಾಗಲಿದೆ. ಕೃಷಿ ಭೂಮಿ ನಿವಾಸಿಗಳು ಸಂಪೂರ್ಣವಾಗಿ ಅಥವಾ ಭಾಗವಾಗಿ ಭೂ ಪರಿವರ್ತನೆ ವರ್ಗಾವಣೆ ಮಾಡಬಹುದು. ಇನ್ನೂ, ಈ ವಿಧೇಯಕವು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಸೆಕ್ಷನ್ 95 ಮತ್ತು 96ನ್ನು ಮತ್ತಷ್ಟುತಿದ್ದುಪಡಿ ತರುವ ಉದ್ದೇಶವನ್ನು ಹೊಂದಿದ್ದು, . ಕೃಷಿ ಭೂಮಿಯಲ್ಲಿ ಸ್ವಂತಕ್ಕೆ ಮನೆ, ಕೃಷಿ ಪರಿಕರಗಳನ್ನು ಸಂಗ್ರಹಿಸಿಡಲು ಕಟ್ಟಡ, ತೋಟದ ಮನೆ ನಿರ್ಮಿಸಿಕೊಳ್ಳಲು ರೈತರು ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೆ ಮಂಜೂರಾತಿ ಆದೇಶ ಹೊರಡಿಸಲು ಜಿಲ್ಲಾಧಿಕಾರಿಗಳಿಗೆ ಗಡುವು ವಿಧಿಸುವ ಉದ್ದೇಶದ ಹಿನ್ನೆಲೆಯಲ್ಲಿ ಮಸೂದೆಗೆ ತಿದ್ದುಪಡಿ ತರಲಾಗಿದೆ..
ಭೂ ಮಾಲೀಕರು ಅರ್ಜಿ ಸ್ವೀಕರಿಸಿದ 15 ದಿನಗಳ ಒಳಗೆ ಜಿಲ್ಲಾಧಿಕಾರಿಗಳು ಅರ್ಜಿ ಪರಿಶೀಲಿಸಿ ಅನುಮೋದನೆ ನೀಡಬೇಕು. ಒಂದು ವೇಳೆ ಜಿಲ್ಲಾಧಿಕಾರಿಗಳು ಅನುಮೋದನೆ ನೀಡುವಲ್ಲಿ ವಿಫಲವಾದರೆ ಸಲ್ಲಿಕೆಯಾದ ಅರ್ಜಿಗೆ ಅನುಮತಿ ನೀಡಲಾಗಿದೆ ಎಂದು ಪರಿಗಣಿಸಬೇಕು ಎಂದು ಈ ಕಾನೂನು ಹೇಳುತ್ತದೆ. ಈ ಮೂಲಕ ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ.
BIGG NEWS : ಕೊರೊನಾ ಭೀತಿ : ರಾಜ್ಯ ಸರ್ಕಾರದಿಂದ ‘ಮಾರ್ಗಸೂಚಿ’ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ
BIGG NEWS : ‘ಅಧಿಕ ಬಡ್ಡಿ’ ವಸೂಲಿ ಮಾಡುವವರ ವಿರುದ್ಧ ದಾಳಿ ನಡೆಸುವ ಅಧಿಕಾರ ಪೊಲೀಸರಿಗಿಲ್ಲ: ಹೈಕೋರ್ಟ್ ಆದೇಶ