ಹಾಸನದಲ್ಲಿ ವೈಯಕ್ತಿಕ ದ್ವೇಷ ಹಿನ್ನೆಲೆ : ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ಹಾಸನ : ಹಾಸನದಲ್ಲಿ ಯುವಕನ ಬರ್ಬರ ಕೊಲೆ ಆಗಿದ್ದು, ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಈ ಒಂದು ಕೊಲೆ ನಡೆದಿದೆ. ಬೇಲೂರು ಪಟ್ಟಣದ ಹೊಳೆ ಬೀದಿಯ ನಿವಾಸಿ ಗಿರೀಶ್ (22) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ಕೊಲೆಗೈದು ಅಜ್ಜಯ್ಯನ ಹಳ್ಳಿಯ ನಿವಾಸಿ ಶ್ರೀನಿವಾಸ್ ಪರಾರಿಯಾಗಿದ್ದಾನೆ. ಕೊಲೆ ಕುರಿತಂತೆ ಬೇಲೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.