ಬೆಂಗಳೂರು : ದರ್ಶನ್ ಮತ್ತು ಗ್ಯಾಂಗ್ ಇಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿನಲ್ಲಿ ನಟ ದರ್ಶನ್ ಗೆ ಕನಿಷ್ಠ ಅಗತ್ಯ ಸೌಲಭ್ಯ ಕಲ್ಪಿಸದ ಹಿನ್ನೆಲೆಯಲ್ಲಿ ದರ್ಶನ್ ಪರ ವಕೀಲರು ಹಾಸಿಗೆ, ದಿಂಬು ನೀಡಲು ನಿರ್ದೇಶನ ನೀಡುವಂತೆ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಇದೀಗ ಇಂದು ಬೆಂಗಳೂರಿನ ಸಿಸಿಎಚ್ 57ನೇ ಕೋರ್ಟ್ ನಲ್ಲಿ ದರ್ಶನ್ ಪರ ವಕೀಲರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಲಾಯಿತು. ಈ ವೇಳೆ CCH 57ನೆ ಕೋರ್ಟ್ ಜಡ್ಜ್ ವಿಚಾರಣೆಯನ್ನು ಸಂಜೆ 4 ಗಂಟೆಗೆ ಮುಂದೂಡಿದರು. ಸಂಜೆ 4 ಗಂಟೆಗೆ ದರ್ಶನಗೆ ಹಾಸಿಗೆ, ದಿಂಬು ನೀಡಲು ಕೋರ್ಟ್ ಆದೇಶಸುತ್ತಾ ಎಂದು ಕಾದು ನೋಡಬೇಕು.