ಬೆಂಗಳೂರು: ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಇಂದಿನಿಂದ ರಾಜ್ಯಾಧ್ಯಂತ ಪೆಟ್ರೋಲ್ 3 ರೂ, ಡೀಸೆಲ್ 3.5 ರೂ ಹೆಚ್ಚಳವಾಗಿದೆ.
ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ರೀಟೆಲ್ ಸೇಲ್ಸ್ ಟ್ಯಾಕ್ಸ್ ದರವನ್ನು ಹೆಚ್ಚಳ ಮಾಡಿ ಆದೇಶಿಸಿದೆ.
ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದದ್ದು, ಈಗ 29.84% ಗೆ ಏರಿಕೆ (3.9% ಹೆಚ್ಚಳ)ಯಾಗಿದೆ. ಅಂತೆಯೇ ಡಿಸೇಲ್ ಈ ಹಿಂದೆ- 14.34% ಇದ್ದದ್ದು, ಈಗ 18.44%ಗೆ ಏರಿಕೆ ಅಂದರೆ 4.1% ರಷ್ಟು ಏರಿಕೆ ಕಂಡಂತೆ ಆಗಿದೆ.
ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಬೆಂಗಳೂರಿನಲ್ಲಿ ಪ್ರಸ್ತುತ ಒಂದು ಲೀಟರ್ ಪೆಟ್ರೋಲ್ ದರ 99.84 ರೂ. ಆಗಿದ್ದು, ಡೀಸೆಲ್ ದರ ಲೀಟರ್‌ಗೆ 85.93 ರೂ. ಆಗಿದೆ. ಇದೀಗ ತೆರಿಗೆ ಹೆಚ್ಚಳದ ಬಳಿಕ ಪೆಟ್ರೋಲ್ ದರ ಲೀಟರ್‌ಗೆ 102.84 ರೂ ಆಗಿದೆ.
ಡೀಸೆಲ್ ದರ ಲೀಟರ್‌ಗೆ 89.43 ರೂ ಆಗಲಿದೆ. ಸಾಗಾಟ ವೆಚ್ಚಕ್ಕನುಗುಣವಾಗಿ ದರ ವ್ಯತ್ಯಾಸವಾಗುವುದರಿಂದ ವಿವಿಧ ಜಿಲ್ಲೆಗಳಲ್ಲಿ ಮತ್ತು ಗ್ರಾಮೀಣ ಪ್ರದೇಶದಲ್ಲಿ ದರ ಇನ್ನೂ ಹೆಚ್ಚಾಗಿದೆ.
ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚಳವಾಗಿದೆ.