ಮಂಗಳೂರು : ಪಿಎಫ್ಐ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು ಇದೀಗ ಸ್ಪೋಟಕ ಮಾಹಿತಿಯೊಂದನ್ನು ಕಲೆ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರಿಗೆ ಪಿಎಫ್ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ.
ಯೆಸ್, ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಇದ್ದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯದ ಕಡೆ ಪಿಎಫ್ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಮಿತ್ತೂರಿನಲ್ಲಿರುವ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ಯುವಕರಿಗೆ ಪಿಎಫ್ಐ ಟೆರರ್ ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿಯನ್ನು ಕಲೆ ಹಾಕಿದ್ದಾರೆ. 2007 ರಿಂದ ಸಾವಿರಾರು ಯುವಕರಿಗೆ ಟ್ರೈನಿಂಗ್ ನೀಡಲಾಗುತ್ತಿತ್ತು, ಈ ಸಂಬಂಧ ಆಯೂಬ್ ಅಗ್ನಾಡಿ ಎಂಬ ಟ್ರಸ್ಟಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಅದರ ಎಂಟು ಅಂಗಸಂಸ್ಥೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿದೆ. ಈ ಮೂಲಕ ಪಿಎಫ್ಐ ನ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿದೆ.
BIG BREAKING NEWS: ಕಾಬೂಲ್ನಲ್ಲಿ ಭೀಕರ ಬಾಂಬ್ ಸ್ಫೋಟ 19 ಸಾವು, 29 ಮಂದಿಗೆ ಗಾಯ| kabul bomb blast