ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ 4ನೇ ಸುತ್ತಿನ (ಸ್ಟ್ರೇ ವೇಕೆನ್ಸಿ) ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದ್ದು, ಈ ಮೂಲಕ 2025ನೇ ಸಾಲಿನ ಕೌನ್ಸೆಲಿಂಗ್ ಪ್ರಕ್ರಿಯೆ ಮುಗಿದಂತಾಗಿದೆ.
ಈ ಸುತ್ತಿಗೆ ಲಭ್ಯ ಇದ್ದ ಒಟ್ಟು 898 ಕ್ಲಿನಿಕಲ್ ಸೀಟುಗಳ ಪೈಕಿ 115 ಸೀಟು ಹಂಚಿಕೆಯಾಗಿದೆ. ಇನ್ನೂ 783 ಸೀಟು ಹಂಚಿಕೆಯಾಗದೆ ಬಾಕಿ ಉಳಿದಿವೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.
ಸೀಟು ಹಂಚಿಕೆಯಾದವರು ಮಾ.9ರಿಂದ 11ರೊಳಗೆ ಶುಲ್ಕ ಪಾವತಿಸಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬೇಕು. ಮಾ.12ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.
ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ








