ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 20ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಶುಲ್ಕ ಪಾವತಿಗೆ ಏ.22 ಕೊನೆ ದಿನ. ಏ.8ಕ್ಕೆ ಇದ್ದ ಕೊನೆ ದಿನಾಂಕವನ್ನು ಅಭ್ಯರ್ಥಿಗಳ ಕೋರಿಕೆ ಮೇಲೆ ವಿಸ್ತರಿಸಿದ್ದು, ಪುನಃ ಮುಂದೂಡುವುದಿಲ್ಲ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.








