ಬೆಂಗಳೂರು : ಹಾಸ್ಟೆಲ್ ಕೊಠಡಿ ಒಂದರಲ್ಲಿ PHD ವಿದ್ಯಾರ್ಥಿ ಒಬ್ಬ ಅನುಮಾನವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ಈ ಒಂದು ಘಟನೆ ನಡೆದಿದೆ.ತಿಂಡಿ ತಿಂದು ಮಲಗಿದಾತ ಏಕಾಏಕಿ ಸಾವನ್ನಪ್ಪಿದ್ದಾನೆ. ಹೇಗೆ ಸಾವಿಗೀಡಾಗಿದ್ದಾನೆ ಎನ್ನುವುದು ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ಚಿಕ್ಕಬಳ್ಳಾಪುರ ಮೂಲದ ರಂಗನಾಥ್ ನಾಯಕ್ (27) ಎಂದು ಹೇಳಲಾಗುತ್ತಿದ್ದು, ಕಳೆದ ಕೆಲ ತಿಂಗಳ ಹಿಂದೆ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ. ನಂತರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ. ಅದಾದ ಬಳಿಕ ಆಯುರ್ವೇದಿಕ್ ಚಿಕಿತ್ಸೆ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ.

ಪಿಹೆಚ್ ಡಿ ವ್ಯಾಸಂಗ ಮಾಡುತ್ತಿದ್ದ ರಂಗನಾಥ್ ನಿನ್ನೆ ಬೆಳಗ್ಗೆ ಕ್ಯಾಂಟೀನ್​​​ಗೆ ಹೋಗಿ ತಿಂಡಿ ತಿಂದು ರೂಮಿಗೆ ಹೋಗಿ ಲಾಕ್ ಹಾಕಿಕೊಂಡಿದ್ದ. ಮಧ್ಯಾಹ್ನ ರೂಮೇಟ್ ಹೋಗಿ ಬಾಗಿಲು ಬಡಿದಾಗ ತೆಗೆದಿರಲಿಲ್ಲ‌. ಅನುಮಾನ ಬಂದು ಬಾಗಿಲು ಬಡಿದು ನೋಡಿದಾಗ ಆತ ಸಾವನ್ನಪ್ಪಿರುವುದು ಗೊತ್ತಾಗಿದೆ. ಮಾಹಿತಿ ನೀಡಿದ ಮೇರೆಗೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share.
Exit mobile version